Monday, January 26, 2026

ಗೋಕಳ್ಳತನ ಗಂಭೀರವಾಗಿ ಪರಿಗಣಿಸಿ : ಕಾಂಗ್ರೆಸ್ ನಿಯೋಗದಿಂದ ಎಎಸ್ಪಿಗೆ ಮನವಿ

ಬಂಟ್ವಾಳ: ತಾಲೂಕಿನಲ್ಲಿ ಗೋವಿನ ಹೆಸರಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಆಪಾದಿಸಿರುವ ಕಾಂಗ್ರೆಸ್, ತಾಲೂಕು ಹಾಗೂ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಬೇಕು ಎಂದು ಎಎಸ್ಪಿ ಸೈದುಲು ಅದಾವತ್ ಅವರಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ನಿಯೋಗ  ಮನವಿ ಸಲ್ಲಿಸಿ ಒತ್ತಾಯಿಸಿದೆ. ತಾಲೂಕಿನಲ್ಲಿ ಯಾರೇ ಗೋ ಕಳ್ಳತನ ಮಾಡಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸಹಿತ ಪಕ್ಷದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...