ಬಂಟ್ವಾಳ: ಪುರಸಭಾ ವ್ಯಾಪ್ತಿಯ ವಾರ್ಡ್ ನಂ. 8ರಲ್ಲಿ ಕಳೆದ ಕೆಲವು ದಿನಗಳಿಂದ ನಳ್ಳಿ ನೀರಿನ ಕೊರತೆ ಎದುರಾಗಿದ್ದು ಹಲವಾರು ಬಾರಿ ಈ ಸಮಸ್ಯೆ ಬಗ್ಗೆ ಸಂಬಂಧಿಕರ ಗಮನಕ್ಕೆ ತಂದರೂ ಈ ಬಗ್ಗೆ ಯಾವುದೇ ರೀತಿಯ ಪರಿಹಾರವಾಗಿಲ್ಲ.


ಈ ಬಾರಿ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಕೆಳಗಿನ ಪೇಟೆ ಬಂದ್ ಮಾಡಿ ಎಲ್ಲಾ ಸಂಘಟನೆಗಳು, ಪಕ್ಷಗಳನ್ನೂ ಮಹಿಳೆಯರನ್ನೂ ಮಕ್ಕಳನ್ನೂ ಸೇರಿಸಿ ತೀವ್ರ ಸ್ವರೂಪದ ಪ್ರತಿಭಟನೆ ಮಾಡುವುದಾಗಿ ಜೆ. ಡಿ. ಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದು ಮುಖ್ಯಾಧಿಕಾರಿ ಗಳು ಸಕಾರಾತ್ಮಕ ವಾಗಿ ಸ್ಪಂದಿಸಿ ಭರವಸೆ ನೀಡಿದರು.
