Monday, February 2, 2026

ಬಿ.ವಿ.ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’  ನಾಟಕೋತ್ಸವದ ಮೂಲಕ ಕಾವ್ಯಾಮೃತ ರಸಸ್ವಾದ : ಅನಂತಕೃಷ್ಣ ಹೆಬ್ಬಾರ್

ಬಂಟ್ವಾಳ: ಮಂಚಿಯ ಕಾವ್ಯಾಮೃತ ರಸಸ್ವಾದ ನಾಟಕೋತ್ಸವದ ಮೂಲಕ ಎಲ್ಲರಿಗೂ ಸುಖಾನುಭವ ನೀಡುತ್ತಿದೆ ಎಂದು ವಿಟ್ಲ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಅನಂತಕೃಷ್ಣ ಹೆಬ್ಬಾರ್ ಹೇಳಿದರು.

ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಮಂಚಿ ನೂಜಿಬೈಲು ಅನುದಾನಿತ ಹಿ.ಪ್ರಾ. ಶಾಲೆಯ ವಠಾರದಲ್ಲಿ ಶುಕ್ರವಾರ ಆರಂಭಗೊಂಡ ಬಿ.ವಿ.ಕಾರಂತ ನೆನಪಿನ ‘ಮಂಚಿ ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿ.ವಿ.ಕಾರಂತರ ರಂಗಬದುಕು ಎಲ್ಲರಿಗೂ ಮಾದರಿಯಾಗಿದ್ದು, ಟ್ರಸ್ಟ್ ನ ಕ್ರಿಯಾಶೀಲತೆಯ ಚಟುವಟಿಕೆ ಇದನ್ನು ಶಾಶ್ವತವಾಗಿ ನೆಲೆಗೊಳ್ಳುವಂತೆ ಮಾಡಲಿ ಎಂದವರು ಹಾರೈಸಿದರು.

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು ಅವರು ಮಾತನಾಡಿ, ಬಿ.ವಿ.ಕಾರಂತರ ಬದುಕಿನ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ರಂಗಭೂಮಿಕಾ ಟ್ರಸ್ಟ್‌ನ ಕಾಳಜಿ ಪ್ರಶಂಸನೀಯ ಎಂದು ಅವರು ಹೇಳಿದರು.

ಮಂಚಿ ನೂಜಿಬೈಲ್ ಅನುದಾನಿತ ಹಿ.ಪ್ರಾ. ಶಾಲೆಯ ಸಂಚಾಲಕಿ ನೂಜಿಬೈಲ್ ಶಾಂತಲಾ‌ ಎನ್. ಭಟ್ ಮಾತನಾಡಿ, ಯುವಪೀಳಿಗೆಗೆ ಮಾದರಿಯಾಗುವಂತ ಸತ್ಯವಂತಿಕೆಯ ಬದುಕನ್ನು ಸಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂಕಲ್ಪತೊಡುವಂತೆ ಕರೆ ನೀಡಿದರು.

ಮಂಚಿ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ವೇದಿಕೆಯಲ್ಲಿ‌ ಉಪಸ್ಥಿತರಿದ್ದರು. ಟ್ರಸ್ಟ್ ಉಪಾಧ್ಯಕ್ಷರಾದ ಗಣೇಶ್ ಐತಾಳ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಉಮಾನಾಥ ರೈ ವಂದಿಸಿದರು. ಕಾರ್ಯದರ್ಶಿ ಎನ್.ರಮಾನಂದ ಕಾರ್ಯಕ್ರಮ ನಿರ್ವಹಿಸಿದರು.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...