Friday, July 11, 2025

ಮಂಚಿ ಕುಕ್ಕಾಜೆ ವ್ಯ.ಸೇ.ಸ. ಬ್ಯಾಂಕ್: ಅಧ್ಯಕ್ಷರಾಗಿ ಉಮ್ಮರ್ ಮಂಚಿ ಆಯ್ಕೆ

ಬಂಟ್ವಾಳ: ತಾಲೂಕಿನ ಮಂಚಿ ಹಾಗೂ ಇರಾ ಗ್ರಾಮಗಳ ವ್ಯಾಪ್ತಿಗೊಳಪಟ್ಟ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮಂಚಿ ಇದರ ನೂತನ ಅಧ್ಯಕ್ಷರಾಗಿ ಬಿ. ಉಮರ್ ಮಂಚಿ ಅವರು ಅವಿರೋಧವಾಗಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ವಿಶ್ವನಾಥ್ ನಾಯ್ಕ್ ನಿರ್ಭೈಲು ಆಯ್ಕೆಯಾದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 14 ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು 9 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡವರನ್ನು ಮಾಜಿ ಸಚಿವ ಬಿ. ರಮನಾಥ್ ರೈ, ಮಂಗಳೂರು ಶಾಸಕ ಯು. ಟಿ. ಖಾದರ್, ಬಂಟ್ವಾಳ ತಾ.ಪಂ. ನ ಅಧಕ್ಷರಾದ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ವಾಸ್ ಆಲಿ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದಲ್ ರಝಾಕ್ ಕುಕ್ಕಾಜೆ, ಮಂಚಿ ವಲಯ ಕಾಂಗ್ರೆಸ್ ನ ಅಧ್ಯಕ್ಷ ಅಬ್ದುಲ್ ರಹಿಮಾನ್, ಇರಾ ವಲಯ ಕಾಂಗ್ರೆಸ್ ನ ಅಧ್ಯಕ್ಷ ಅನಿಲ್ ಕುಮಾರ್ ಸೂತ್ರಬೈಲ್, ಅಭಿನಂದನೆ ಸಲ್ಲಿಸಿದ್ದಾರೆ.  ಬಂಟ್ವಾಳದ ಸಹಕಾರಿ ಅಭಿವೃದ್ಧಿ ಅಧಿಕಾರಿ ತ್ರೀವೇಣಿ ಕೆ.ರಾವ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

More from the blog

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...