Wednesday, January 28, 2026

ದ.ಕ.ಜಿಲ್ಲೆಯ ಬಂಟ್ವಾಳ ವೃದ್ದೆಗೆ ಪಾಸಿಟಿವ್ ಮಂಗಳೂರು ಖಾಸಗಿ ಆಸ್ಪತ್ರೆಯ ಸುತ್ತಮುತ್ತ ಸೀಲ್ ಡೌನ್

ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಮಹಿಳೆಗೆ ಕೊರೊನಾ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಅ ಮಹಿಳೆ ಈ ಮೊದಲು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್ ಮಾಡಲಾಗಿದೆ.
ಮಂಗಳೂರಿನ ಪಡೀಲು ಬಳಿಯಿರುವ
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿದ್ದ 75 ವರ್ಷ ವಯಸ್ಸಿನ ವೃದ್ದೆಗೆ ಕೊರೋನ ಸೋಂಕು ಹಿನ್ನಲೆ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳು ಕಂಟೈನ್ಮೆಂಟ್ ಝೋನ್ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಆದೇಶ ಘೋಷಣೆ ಮಾಡಿದ್ದಾರೆ.

ಆಸ್ಪತ್ರೆಯ ಪೂರ್ವ ಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಥ್ ಕೃಪಾ ರೈಸ್ ಮಿಲ್, ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿ 73 ಮತ್ತು ದಕ್ಷಿಣಕ್ಕೆ ಸರ್ಕಾರಿ ಜಾಗದ ಸುತ್ತ ಕಂಟೈನ್ಮೆಂಟ್ ಏರಿಯಾ ಎಂದು ಜಿಲ್ಲಾಧಿಕಾರಿ ಅವರು ಘೋಷಣೆ ಮಾಡಿದ್ದಾರೆ.

ಆಸ್ಪತ್ರೆ ಜೊತೆಗೆ ಎರಡು ಮನೆ, ಐದು ಅಂಗಡಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಸೀಲ್ ಡೌನ್ ಅದ ಪ್ರದೇಶಗಳಿಂದ 5 ಕಿಲೋಮೀಟರ್ ಸುತ್ತಾಮುತ್ತಾ ಬಫರ್ ಝೋನ್ ಎಂದು ಗುರುತಿಸಲಾಗಿದೆ.

ಕಲ್ಲಾಪು, ಕುಡುಪು, ಫರಂಗಿಪೇಟೆ, ಫಳ್ನೀರ್ ವರೆಗೂ ಬಫರ್ ಝೋನ್‌ ಎಂದು ಗುರುತಿಸಲ್ಪಟ್ಟಿದೆ. 42 ಸಾವಿರ ಮನೆ, 1800 ಅಂಗಡಿ ಮತ್ತು ಕಚೇರಿ, 1.8 ಲಕ್ಷ ಜನರು ಬೋರ್ ಝೋನ್ ಅಡಿಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...