Friday, January 30, 2026

ಮುಖ್ಯಮಂತ್ರಿ ಬದಲಾವಣೆ ಇಲ್ಲ

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‌ನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್‌ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ, ಆಂತರಿಕ ಕಚ್ಛಾಟವನ್ನು ಮುಚ್ಚಿಡಲು ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡಿದೆ ಎಂದು ಹೇಳಿದ್ದಾರೆ.

ಗೊಂದಲ ಸೃಷ್ಟಿಸುವ ಕಾಂಗ್ರೆಸ್ ಆಟ ನಡೆಯುವುದಿಲ್ಲ, ಮೊದಲು ಅವರಲ್ಲಿರುವ ಗೊಂದಲವನ್ನು ಸರಿ ಮಾಡಿಕೊಳ್ಳಲಿ, ಕಾಂಗ್ರೆಸ್ ಭವಿಷ್ಯ ಏನೆಂಬುದು ಮುಂದಿನ ಚುನಾವಣೆಯಲ್ಲಿ ಗೊತ್ತಾಗಲಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಹಗರಣಗಳು ಬಯಲಿಗೆ ಬಂದಿದೆ. ಸೋನಿಯಾ, ರಾಹುಲ್ ಗಾಂಧೀಜಿ ಇಡಿ ತನಿಖೆ, ಡಿಕೆಶಿಯವರಿಗೆ ಜಾಮೀನು, ಮುಖ್ಯಮಂತ್ರಿ ಗೊಂದಲ, ದಲಿತ ಮುಖ್ಯಮಂತ್ರಿ ಚರ್ಚೆ ಇವೆಲ್ಲ ಗೊಂದಲಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಇಂತಹ ಟ್ವೀಟ್ ಮಾಡುತ್ತಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಬೊಮ್ಮಯಿವರು ಪೂರ್ಣವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ತಿಳಿಸಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...