Wednesday, February 12, 2025

ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ: 31 ರಂದು ವೆಬ್ ಸೈಟ್ ಅನಾವರಣ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಮಾರ್ಚ್ 7 ಮತ್ತು 8ರಂದು ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ ಜ.31ರಂದು ಬೆಳಗ್ಗೆ 10:00 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರಕರ್ತರ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಯು.ಟಿ.ಖಾದರ್, ಡಿ.ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿ.ಯಸ್. ಹರ್ಷ, ದ.ಕ.ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...