Wednesday, July 9, 2025

ಮಂಗಳೂರು: ದೇಶೀಯ ವಿಮಾನ ಹಾರಾಟ ಇಂದಿನಿಂದ ಪ್ರಾರಂಭ

ಮಂಗಳೂರು: ಲಾಕ್‌ಡೌನ್‌ನಿಂದಾಗಿ ದೇಶೀಯ, ಅಂತಾರಾಷ್ಟ್ರೀಯ ವಿಮಾನ ಸೇವೆಗಳು ಸ್ಥಗಿತಗೊಂಡ ಬಳಿಕ ಮೇ 25ರಿಂದ ಮಂಗಳೂರು ವಿಮಾನ ನಿಲ್ದಾಣ ಮತ್ತೆ ದೇಶೀಯ ವಿಮಾನಗಳ ಸಾಮಾನ್ಯ ಹಾರಾಟಕ್ಕೆ ಸಾಕ್ಷಿಯಾಗುತ್ತಿದೆ. ದೇಶೀಯ ವಿಮಾನ ಹಾರಾಟ ಮಂಗಳೂರು ವಿಮಾನ ನಿಲ್ದಾಣದಲ್ಲೂ ಇಂದಿನಿಂದ ಪ್ರಾರಂಭಗೊಳ್ಳಲಿದೆ. ಸ್ಪೈಸ್‌ಜೆಟ್ ಹಾಗೂ ಏರ್ ಇಂಡಿಗೊ ಈಗಾಗಲೇ ತಮ್ಮ ವಿಮಾನ ಹಾರಾಟದ ವಿವರಗಳನ್ನು ನೀಡಿವೆ.

ಸ್ಪೈಸ್ ಜೆಟ್‌ನ ವಿಮಾನಗಳು ಮುಂಬೈ-ಮಂಗಳೂರು ಹಾಗೂ ಬೆಂಗಳೂರು-ಮಂಗಳೂರು ಮಧ್ಯೆ ಮೇ.25ರಿಂದಲೇ ಹಾರಾಟ ಪ್ರಾರಂಭಿಸಲಿವೆ. ಅದೇ ರೀತಿ ಇಂಡಿಗೊ ವಿಮಾನಗಳು ಮಂಗಳೂರು-ಬೆಂಗಳೂರು, ಮುಂಬೈ-ಮಂಗಳೂರು, ಚೆನ್ನೈ-ಮಂಗಳೂರು ಮಧ್ಯೆ ಹಾರಾಟ ನಡೆಸಲಿವೆ. ವಿಮಾನ ಸಂಸ್ಥೆಗಳು ಈಗಾಗಲೇ ಪ್ರಕಟಣೆ ನೀಡಿದಂತೆಯೇ ಕಾರ್ಯನಿರ್ವಹಿಸುವುದು ಬಹುತೇಕ ನಿಶ್ಚಿತ. ಆದರೆ ಮುಂಬೈ ಏರ್‌ಪೋರ್ಟ್ ಇನ್ನೂ ಕಾರ್ಯಾಚರಣೆಗೆ ಸಿದ್ಧಗೊಂಡಂತೆ ಕಾಣುತ್ತಿಲ್ಲ. ಹಾಗಾಗಿ ಅಲ್ಲಿಂದ ವಿಮಾನ ಬರುವುದು ಸಂಶಯ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ವಾರಂಟೈನ್ ಕಡ್ಡಾಯ: ದೇಶೀಯ ವಿಮಾನಗಳಲ್ಲಿ ಬರುವ ಪ್ರಯಾಣಿಕರಿಗೂ ಸಾಂಸ್ಥಿಕ ಕ್ವಾರಂಟೈನ್ 7 ದಿನ ಹಾಗೂ ಮತ್ತೆ 7 ದಿನ ಮನೆಯಲ್ಲಿ ಕ್ವಾರಂಟೈನ್ ಕಡ್ಡಾಯವಾಗಿರಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ.

ಆಗಮಿಸುವ ಪ್ರಯಾಣಿಕರಿಗೆ ನೆರವು ನೀಡುವುದಕ್ಕೆ ವಿಮಾನ ನಿಲ್ದಾಣ ಟರ್ಮಿನಲ್‌ನಲ್ಲಿ ಡೆಸ್ಕ್ ಪ್ರಾರಂಭಿಸಲಾಗಿದೆ, ಬರುವ ಪ್ರಯಾಣಿಕರನ್ನು ಅಲ್ಲಿ ಗುರುತಿಸಿ, ಅವರನ್ನು ಆಯಾ ತಾಲೂಕುಗಳಿಗೆ ಕಳುಹಿಸಿ ಕ್ವಾರಂಟೈನ್ ಮಾಡಲಾಗುವುದು. ರೈಲಿನಲ್ಲಿ ಬರುವವರಿಗೂ ಇದೇ ವಿಧಾನ ಅನುಸರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ವೃದ್ಧರು, ಮಕ್ಕಳು, ಗರ್ಭಿಣಿಯರಿಗೆ ಪರೀಕ್ಷೆ ನಡೆಸಿ ಎರಡು ದಿನಗಳಲ್ಲಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸಿ ಅಲ್ಲಿ ನಿಗಾವಣೆಯಲ್ಲಿ ಇರಿಸಲಾಗುವುದು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...