Saturday, July 12, 2025

ಮಂಗಳೂರು : ವರದಿ ಬರುವ ಮೊದಲೇ ಮನೆಗೆ ಕಳುಹಿಸಿದ ವ್ಯಕ್ತಿಗೆ ಕೊರೊನಾ – ಬೋಳಿಯಾರು ಗ್ರಾಮದಲ್ಲಿ ಆತಂಕ

ಬಂಟ್ವಾಳ: ಮುಂಬೈನಿಂದ ಬಂದ ಬೋಳಿಯಾರು ವ್ಯಕ್ತಿಗೆ ನಿನ್ನೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ದೇರಳಕಟ್ಟೆ ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ನಲ್ಲಿರಿಸಲಾಗಿತ್ತು. ಆದರೆ, ವರದಿ ಬರುವುದಕ್ಕೂ ಮೊದಲೇ ವ್ಯಕ್ತಿಯನ್ನು ಮನೆಗೆ ಕಳುಹಿಸಿದ್ದು, ಜಿಲ್ಲಾಡಳಿತದ ಎಡವಟ್ಟಿಗೆ ಇಡೀ ಗ್ರಾಮಕ್ಕೆ ಆತಂಕ ಶುರುವಾಗಿದೆ.

ಮಂಗಳೂರು ತಾಲೂಕಿನ ಬೋಳಿಯಾರು ಗ್ರಾಮ ವ್ಯಕ್ತಿಯೋರ್ವ ಮುಂಬೈನಿಂದ ವಾಪಾಸ್ಸಾಗಿದ್ದ. ಆತನನ್ನು ದೇರಳಕಟ್ಟೆ ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌‌ನಲ್ಲಿರಿಸಲಾಗಿತ್ತು. ಆದರೆ, ಆತನ ವರದಿ ಬರೋದಕ್ಕೂ ಮೊದಲೇ ಆತನನ್ನು ಮನೆಗೆ ಕಳುಹಿಸಿದ್ದರು.

ನಿನ್ನೆ ಆತನಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಬಳಿಕ ನಿನ್ನೆ ಮನೆಯಿಂದ ಮತ್ತೆ ಸೋಂಕಿತನನ್ನು ವೆನ್ಲಾಕ್ ಆಸ್ಪತ್ರೆ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಸೋಂಕಿತ ಇಡೀ ಗ್ರಾಮದಲ್ಲಿ ಓಡಾಡಿದ್ದ, ಅಲ್ಲದೇ ಇಡೀ ಕುಟುಂಬದ ಜೊತೆಗೆ ಇ‌ದ್ದ ಎಂದು ಹೇಳಲಾಗಿದ್ದು, ಈ ಕಾರಣದಿಂದ ಬೋಳಿಯಾರು ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...