Friday, January 30, 2026

ಮಂಗಳೂರಿನಲ್ಲಿ ಬೋಟ್ ಮುಳುಗಡೆ ಪ್ರಕರಣ: ಇನ್ನೂ ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರಿಕೆ

ಮಂಗಳೂರು : ಮಂಗಳೂರಿನಲ್ಲಿ ನಿನ್ನೆ ಶ್ರೀ ರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ನಾಲ್ವರಿಗಾಗಿ ಇನ್ನೂ ಹುಡುಕಾಟವನ್ನು ನಡೆಸಲಾಗುತ್ತಿದೆ.
ಮೀನುಗಾರಿಕೆಗಾಗಿ ಮಂಗಳವಾರ ಮುಂಜಾನೆ ತೆರಳಿದ್ದ ಬೋಳಾರದ ಬೋಟ್ ಕಲ್ಲಿಗೆ ಡಿಕ್ಕಿ ಹೊಡೆದು ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಮೀನುಗಾರರ ಪೈಕಿ ಆರು ಜನರು ನಾಪತ್ತೆಯಾದ ಬಗ್ಗೆ ಮಾಹಿತಿ ಸಿಕ್ಕಿತ್ತು.
ಕೂಡಲೇ ಹುಡುಕಾಟ ಪ್ರಾರಂಭಿಸಿ, ಬೊಕ್ಕಪಟ್ಣ ನಿವಾಸಿಗಳಾದ ಸುವರ್ಣ ಹಾಗೂ ಪ್ರೀತಂ ಎಂಬವವರ ಮೃತದೇಹ ಪತ್ತೆಯಾಗಿದೆ. ಕಸಬ ಬೆಂಗ್ರೆ ನಿವಾಸಿಗಳಾದ ಚಿಂತನ್, ಮೊಹಮ್ಮದ್ ಹಸೈನಾರ್, ಮೊಹಮ್ಮದ್ ಅನ್ಸಾರ್, ಝಿಯಾವುಲ್ಲ ಅವರಿಗಾಗಿ ಹುಡುಕಾಟ ಮುಂದುವರೆದಿದೆ.
ಬೋಟ್ ಮುಳುಗಡೆ ಬಳಿಕ ನಾಪತ್ತೆಯಾದ ನಾಲ್ವರಿಗಾಗಿ ತೀವ್ರ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ. ಬೋಟ್ ಕಲ್ಲಿಗೆ ಡಿಕ್ಕಿ ಹೊಡೆದ ರಭಸಕ್ಕೆ ಜಖಂಗೊಂಡಿದ್ದು, ಭಾಗಶಃ ಮುಳುಗಡೆಯಾಗಿದೆ ಎಂದು ಹೇಳಲಾಗುತ್ತಿದೆ.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...