Thursday, January 29, 2026

ಅಮಿತ್ ಶಾ ಮಂಗಳೂರಿಗೆ ಬಂದ್ರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವೆ ಎಂದ ಐವನ್ ಡಿಸೋಜ

ಮಂಗಳೂರು: ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಗೃಹ ಸಚಿವ ಅಮಿತ್ ಶಾ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ಸಮಾವೇಶ ನಡೆಸಲು ಮಂಗಳೂರಿಗೆ ಜ.19 ರಂದು ಬಂದು ಇಲ್ಲಿನ ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದು ಬೇಡ. ಅವರು ಮಂಗಳೂರಿಗೆ ಆಗಮಿಸಿದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವೆ ಎಂದು ಹೇಳಿದರು. ಜನರು ಆಕ್ರೋಶಗೊಂಡಿದ್ದಾರೆ‌. ನಮ್ಮ ಊರಿನಲ್ಲಿ ನಮಗೆ ಶಾಂತಿ ಮುಖ್ಯ. ಇಲ್ಲಿ ಬಂದು ಮತ್ತೆ ಅಶಾಂತಿ ಸೃಷ್ಟಿಸುವುದು ಬೇಡ. ನೀವು ಬಂದಲ್ಲಿ ಗೋಬ್ಯಾಕ್ ಅಮಿತ್ ಶಾ ಎಂದು ಪ್ರತಿಭಟನೆ ಮಾಡಲಾಗುವುದು ಎಂದು ಆಗ್ರಹಿಸಿದರು.
ನಿನ್ನೆಯಿಂದ ಎನ್ಆರ್ ಸಿ, ಸಿಎಎ ಬಗ್ಗೆ ಜನ ಜಾಗೃತಿ ಮೂಡಿಸಲು ಮನೆಮನೆಗೆ ಹೋಗುತ್ತೇವೆ ಎಂಬ ಹೊಸ ನಾಟಕ ಶುರು ಮಾಡಿದೆ. ಇದರಿಂದ ಬಿಜೆಪಿಗೆ ತಲೆ ಕೆಟ್ಟಿದೆ ಎಂದು ಸ್ಪಷ್ಟವಾಗಿದೆ ಎಂದರು. ಯಾವುದಾದರೊಂದು ಜ್ವಲಂತ ಸಮಸ್ಯೆಗಳನ್ನು ಮುಂದಿರಿಸಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಪ್ರಧಾನ ಮಂತ್ರಿಗಳು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಾಡೋದಿಲ್ಲ ಎನ್ನುತ್ತಾರೆ. ಆದರೆ ರಾಷ್ಟ್ರದ ಗೃಹಮಂತ್ರಿ ಅಮಿತ್ ಷಾ ಒಂದು ಇಂಚೂ ಇದರಿಂದ ಹಿಂದೆ ಸರಿಯುವುದಿಲ್ಲ ಎಂದು ಗೊಂದಲ ಸೃಷ್ಟಿಸುತ್ತಾರೆ. ಪೌರತ್ವ ಕಾಯ್ದೆ 1957 ರಲ್ಲಿ ಈ ದೇಶದಲ್ಲಿ ಜಾರಿಗೆ ಬಂದಿದ್ದು, ಹಿಂದೆಯೂ ಕೊಡಲಾಗಿತ್ತು . ಯಾರಿಗೆ ಅವಶ್ಯಕತೆ ಇದೆಯೋ ಅವರ ದಾಖಲೆಗಳನ್ನು ಪರಿಶೀಲನೆ ನಡೆಸಿ ಈ‌ ದೇಶದ ಪೌರತ್ವ ನೀಡಲಾಗುತ್ತಿತ್ತು. ಆದರೆ ನಿಮಗೆ ದೇಶದಲ್ಲಿ ದ್ವೇಷದ ರಾಜಕೀಯ ಮಾಡಲು ಮುಸ್ಲಿಮರನ್ನು ಹೊರಗಿರಿಸಿ ಹೊಸದಾಗಿ ತಿದ್ದುಪಡಿ ಮಾಡಿದಿರಿ. ಈ ಕಾನೂನನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ನಾನು ಒತ್ತಾಯ ಮಾಡುತ್ತೇನೆಂದು ಐವನ್ ಡಿಸೋಜ ಆಗ್ರಹಿಸಿದರು.
ಈ ಸಂದರ್ಭ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಉಪ ಮೇಯರ್ ಮಹಮ್ಮದ್, ನಜೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...