Wednesday, January 28, 2026

ಫೆ.24ರಂದು ಕಿಯೋನಿಕ್ಸ್ ನಿಂದ ವಿಜ್ಞಾನ, ತಂತ್ರಜ್ಞಾನ ಸಮಾವೇಶ

ಮಂಗಳೂರು, ಫೆ.22: ಮಂಗಳೂರಿನಲ್ಲಿ ಸುಸಜ್ಜಿತ ವಿಜ್ಞಾನ ತಂತ್ರಜ್ಞಾನ ಕೇಂದ್ರವನ್ನು ಆರಂಭಿಸುವ ಚಿಂತನೆ ಹೊಂದಿದ್ದು ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ನಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು,ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಾದಾತ್ಮಕ ಅಧಿವೇಶ ನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ. ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಮಾಡಲು, ವಿಶ್ವ ನಾವೀನ್ಯತೆ ಕೇಂದ್ರವಾಗಿ ಬೆಳೆಸುವ ಉದ್ದೇಶವನ್ನು ಈ ಸಮಾವೇಶ ಹೊಂದಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಸಿ.ಎನ್ ಅವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ,ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದ ವರು ಭಾಗವಹಿಸಲಿದ್ದರೆ.

1976 ರಲ್ಲಿ ದ.ಕ ಜಿಲ್ಲೆಯ ರಾಮಕೃಷ್ಣ ಬಾಳಿಗ ಅವರ ಅಧ್ಯಕ್ಷತೆಯಲ್ಲಿ ಆರಂಭಗೊಂಡು ರಾಜ್ಯದ ಪ್ರಮುಖ ಐ‌.ಟಿ ತಂತ್ರಜ್ಞಾನ ಕೇಂದ್ರವಾಗಿ ಬೆಳೆದಿದೆ ಎಂದು ಹರಿಕೃಷ್ಣ ಬಂಟ್ವಾಳ ತಿಳಿಸಿದ್ದಾರೆ.

 

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...