ಮಂಗಳೂರು: ಇಲ್ಲಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ. ಸುಮಾರು 50 ವರ್ಷಗಳ ಇತಿಹಾಸವಿರುವ ಈ ಮಾರುಕಟ್ಟೆಯನ್ನು ತೆರವು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಅದರ ಜೊತೆಗೆ ಪಕ್ಕದ ತರಕಾರಿ ಮತ್ತು ಮೀನು ಮಾರುಕಟ್ಟೆಯನ್ನು ಕೂಡಾ ಮುಚ್ಚಲು ನಿರ್ಧರಿಸಲಾಗಿದೆ. ಎರಡೂ ಕಟ್ಟಡಗಳು ತೀರ ಶಿಥಿಲಾವಸ್ಥೆಯಲ್ಲಿದ್ದು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಹಂತದಲ್ಲಿದೆ. ಆದ್ದರಿಂದ ನೆಲಸಮಗೊಳಿಸಿ ಆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.


ಮಂಗಳೂರಿನಲ್ಲಿ ಲಾಕ್ ಡೌನ್ ಸಂದರ್ಭ ಕೊರೋನ ಸೋಂಕು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮವಿದೆ. ಆದರೆ ಈ ಮಾರುಕಟ್ಟೆಯಲ್ಲಿ ಕೊರೋನ ಸೋಂಕು ತಡೆಗಟ್ಟಲು ಸಾದ್ಯವಾಗದ ಕಾರಣ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ವ್ಯಾಪಾರಿಗಳಿಗೆ ಬೈಕಂಪಾಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಲಾಗಿತ್ತು.












