Friday, June 27, 2025

ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ಮಂಜೂರು: ನಳಿನ್ ಹರ್ಷ

ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ ನಳಿನ್ ಕುಮಾರ್ ರವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದೆ. ಮಾನ್ಯ ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರಿಗೆ ಭೇಟಿಯಾಗಿ ಮಂಗಳೂರಿನಲ್ಲಿ CGHS ವೆಲ್ ನೆಸ್ ಸೆಂಟರ್ ನ್ನು ತೆರೆಯುವಂತೆ ಮನವಿ ಮಾಡಿದ್ದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನ್ ಸುಖ್ ಮಾಂಡವೀಯ ರವರು ಶ್ರೀ ನಳಿನ್ ಕುಮಾರ್ ರವರಿಗೆ ಪತ್ರ ಬರೆದು ಮಂಗಳೂರು ಸೇರಿದಂತೆ ದೇಶದ 20 ನಗರಗಳಲ್ಲಿ CGHS ವೆಲ್ ನೆಸ್ ಸೆಂಟರ್ ಗಳನ್ನು ತೆರೆಯುತ್ತಿರುವುದಾಗಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಹಾಗೂ ನೆರೆಯ ಜಿಲ್ಲೆಗಳ 50ಕ್ಕೂ ಅಧಿಕ ಕೇಂದ್ರ ಸರ್ಕಾರದ ಇಲಾಖೆಗಳ ಸುಮಾರು 5500 ಉದ್ಯೋಗಿಗಳಿದ್ದು, 29000 ಕ್ಕೂ ಅಧಿಕ ನಿವೃತ್ತ ಕೇಂದ್ರ ಸರ್ಕಾರದ ಉದ್ಯೋಗಿಗಳಿದ್ದಾರೆ. ಮಂಗಳೂರಿನಲ್ಲಿ ಈ ಕೇಂದ್ರ ಪ್ರಾರಂಭವಾಗುವುದರಿಂದ ಅವರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ. ತಮ್ಮ ಮನವಿಯನ್ನು ಪುರಸ್ಕರಿಸಿ ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ನ್ನು ಮಂಜೂರು ಮಾಡಿದ ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಧ ಡಾ. ಮನ್ ಸುಖ್ ಮಾಂಡವೀಯರವರಿಗೆ ಮಾನ್ಯ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.

More from the blog

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ತುಳು ನಾಟಕ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮ.. 

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ...

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ..

ಮಂಗಳೂರು : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ವತಿಯಿಂದ 2025 ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾಮಟ್ಟದಲ್ಲಿ...

ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ವಿಟ್ಲ: ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ 18 ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ...