ಪರಿಯಾಲ್ತಡ್ಕ ಮಣಿಲ ಚರ್ಚ್ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ಮಂಗಳೂರು ಧರ್ಮಪ್ರಾಂತ್ಯ ತೀವ್ರವಾಗಿ ಖಂಡಿಸುತ್ತದೆ ಮತ್ತು ಸಮಗ್ರ ತನಿಖೆಯನ್ನು ಕೈಗೊಳ್ಳಲಿದೆ ಎಂದು ಪ್ರಕಟಣೆಯನ್ನು ಮಂಗಳೂರು ಧರ್ಮಪ್ರಾಂತ್ಯ ಹೊರಡಿಸಿದೆ.

ದೇಶದ ಕಾನೂನು ಸುವ್ಯವಸ್ತೆಗೆ ಬರುವ ಕಾರಣದಿಂದ ತನಿಖೆ ಸಂಪೂರ್ಣ ಸಹಕಾರವನ್ನು ನೀಡುತ್ತದೆ. ತಕ್ಷಣದಿಂದ ಜಾರಿಗೆ ಬರುವಂತೆ ಧರ್ಮಗುರುಗಳನ್ನು ಧಾರ್ಮಿಕ ಸೇವೆಯಿಂದ ತೆಗೆದುಹಾಕಲಾಗುತ್ತದೆ. ಜನರ ಆಧ್ಯಾತ್ಮಿಕ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಬೇರೆಯವರನ್ನು ನಿಯೋಜಿಸಲಾಗುವುದು ಎಂದು ಪ್ರಕಟಣೆಯನ್ನು ಮಂಗಳೂರು ಧರ್ಮಪ್ರಾಂತ್ಯ ಹೊರಡಿಸಿದೆ.