ಮಂಗಳೂರು: ಮಂಗಳೂರು ವಳಚ್ಚಿಲ್ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನ ಸುಮಾರು 30ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್ ಉಂಟಾಗಿದೆ.

ಫೆ. 7ರ ಬುಧವಾರ ರಾತ್ರಿ ವೇಳೆ ಕೆಲ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.