Friday, January 30, 2026

ಪಾಕಿಸ್ತಾನ ಪರ ಘೋಷಣೆ ಆರೋಪ : ಮಂಗಳೂರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಮಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟದ ಸಂದರ್ಭ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕ್‌ ಪರ ಘೋಷಣೆ ಕೂಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದು ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟವಾಗಿದೆ. ಕಾಂಗ್ರೆಸ್ ಕಚೇರಿ ಒಳಗೆ ನುಗ್ಗದಂತೆ ಪೊಲೀಸರು ಮೊದಲೇ ಬ್ಯಾರಿಕೇಡ್ ಅಳವಡಿಸಿದ್ದರು. ಸದ್ಯ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಮಪ್ ಅರ್ಗವಾಲ್ ಭೇಟಿ ನೀಡಿದ್ದಾರೆ.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...