Wednesday, June 25, 2025

ಕೊರೋನಾ ಮಹಾಮಾರಿಯಿಂದ ನಮ್ಮನ್ನು ರಕ್ಷಿಸೋಣ: ಡಾ: ಅಶ್ವಥ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕೊರೋನಾ ಮಹಾಮಾರಿಯ ವಿರುದ್ಧ ನಮ್ಮನ್ನು ರಕ್ಷಿಸಲು ಕೈಗಳನ್ನು ಸ್ವಚ್ಛತೆಯಿಂದ ಇಡಲು ಲಾಕ್‍ಡೌನ್ ಸಂದರ್ಭ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗಳಿಗೆ ಮಂಗಳೂರಿನ ಉರ್ವಸ್ಟೋರ್‍ನ ಭುವಿನಾ ಡೆಂಟಲ್ ಕ್ಲಿನಿಕ್‍ನ ಡೆಂಟಲ್ ಸರ್ಜನ್ ಡಾ.ಅಶ್ವತ್ಥ್ ಕುಮಾರ್ ಅವರ ಪ್ರಾಯೋಜಕತ್ವದಲ್ಲಿ 100 ಮುಖಕವಚ(ಮಾಸ್ಕ್) ಮತ್ತು 100 ಸ್ಯಾನಿಟೈಸರ್‍ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಡಾ.ಅಶ್ವತ್ಥ್‍ ರವರು ಮಾತನಾಡಿ, ಹೆಚ್ಚುತ್ತಿರುವ ಕೊರೋನಾ ಹಾವಳಿಯಿಂದ ಗೃಹರಕ್ಷಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮುಖಕವಚ(ಮಾಸ್ಕ್) ಮತ್ತು ಸ್ಯಾನಿಟೈಸರ್‍ಗಳನ್ನು ನೀಡಲಾಗಿದೆ ಎಂದರು. ಕೊರೋನಾ ವೈರಸ್‍ನಿಂದ ರಕ್ಷಿಸಲು ಮುಖಕ್ಕೆ ಮಾಸ್ಕ್ ಧರಿಸಬೇಕು ಮತ್ತು ಸ್ವಚ್ಛತೆಗಾಗಿ ಸ್ಯಾನಿಟೈಸರ್‍ನ್ನು ಬಳಸಬೇಕು ಹಾಗೂ ಕೊರೋನಾ ಮಹಾಮಾರಿಯಿಂದ ನಮ್ಮನ್ನು ನಾವು ಮೊದಲು ರಕ್ಷಿಸಿಕೊಳ್ಳಬೇಕು ಎಂದು ಗೃಹರಕ್ಷಕರಿಗೆ ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ.ಮುರಲೀ ಮೋಹನ ಚೂಂತಾರು ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಗೃಹರಕ್ಷಕ/ಗೃಹರಕ್ಷಕಿಯರು ಮತ್ತು ಜಿಲ್ಲಾ ಕಛೇರಿಯ ಪ್ರಥಮದರ್ಜೆ ಸಹಾಯಕಿ ಅನಿತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಿರಿಯ ಗೃಹರಕ್ಷಕ ರಮೇಶ್ ಭಂಡಾರಿ ವಂದನಾರ್ಪಣೆಯನ್ನು ಮಾಡಿದರು.

More from the blog

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...