Thursday, February 13, 2025

ಬಿಸಿರೋಡು-ಅಡ್ಡಹೊಳೆ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್

ಬಂಟ್ವಾಳ: ಬಿಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ದೂರನ್ನು ಆಲಿಸಿದ ಅವರು ಕೆಲವೊಂದು ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ರೈತ ಸಂಘ ಹಾಗೂ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬೆಳಿಗ್ಗೆ ಬಿಸಿರೋಡಿನಿಂದ ಗುಂಡ್ಯವರೆಗೆ ವೀಕ್ಷಿಸಲು ಅಧಿಕಾರಿಗಳ ಜೊತೆ ತೆರಳಿದರು.

ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರುವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯನ್ನು ವೀಕ್ಷಣೆ ನಡೆಸಿದ ಬಳಿಕ ,ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿಯತ್ತ ತೆರಳಿದ್ದಾರೆ.

ಮೆಲ್ಕಾರ್ ನಲ್ಲಿ ಗುಡ್ಡವನ್ನು ಅಗೆದ ಪರಿಣಾಮವಾಗಿ ಕೆಲವೊಂದು ಮನೆಗಳಿಗೆ ಹಾನಿಯಾಗುವ ಸಂಭವವು ಇರುವುದರಿಂದ ಮತ್ತು ಇನ್ನು ಕೆಲವು ಮನೆಗಳಿಗೆ ಸಂಪರ್ಕ ರಸ್ತೆ ಕಡಿತಗೊಂಡ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಬದಲಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸುವ ಕುರಿತು ವಿಷಯ ಪ್ರಸ್ತಾಪ ಮಾಡಿದ್ದಲ್ಲದೆ,ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಯ ವೇಳೆ ದೂಳಿನ ಸಮಸ್ಯೆ ಉಂಟಾಗುತ್ತಿದ್ದು,ಸರಿಯಾಗಿ ನೀರು ಹಾಕುತ್ತಿಲ್ಲ ಎಂಬ ದೂರನ್ನು ಸಾರ್ವಜನಿಕ ರು ಜಿಲ್ಲಾಧಿಕಾರಿ ಅವರಲ್ಲಿ ನೀಡಿದರು‌.

ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಇನ್ನು ಮುಂದೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ದೂರುಗಳು ಬರದ ರೀತಿಯಲ್ಲಿ ಸ್ಥಳೀಯ ಗ್ರಾ.ಪಂ.ನವರು ರಸ್ತೆ ನೀರು ಹಾಕುವ ಜವಾಬ್ದಾರಿ ವಹಿಸಬೇಕು ಎಂದು ತಹಶಿಲ್ದಾರ್ ಅವರಲ್ಲಿ ತಿಳಿಸಿದರು.

ದೂಳಿನ ಸಮಸ್ಯೆಯಿಂದ ಕಲ್ಲಡ್ಕ ಪರಿಸರದ ಅನೇಕರಿಗೆ ಅಸ್ತಮಾ ,ಶ್ವಾಸಕೋಶದ ರೋಗ ಬಂದಿದ್ದು, ಈ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಅವರಲ್ಲಿ ಅಳಲು ತೋಡಿಕೊಂಡಿರು.

ಸಾರ್ವಜನಿಕರ ನೀಡುವ ದೂರಿಗೆ ಕಂಪೆನಿಯ ಕೆಲಸಗಾರರು ಕಿವಿಗೊಡುವುದಿಲ್ಲ ಎಂದು ಅವರು ಆರೋಪ ಮಾಡಿದರು. ಮುಂದೆ ಇಂತಹ ಯಾವುದೇ ಸಮಸ್ಯೆ ಗಳು ಉದ್ಭವವಾಗಂತೆ ತಹಶಿಲ್ದಾರ್ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.

ಕೆಲವು ಕಡೆಗಳಲ್ಲಿ ರಸ್ತೆ ಕಾಮಗಾರಿ ವೇಳೆ ಕುಡಿಯುವ ನೀರಿನಪೈಪ್ ಗಳನ್ನು ತುಂಡರಿಸಲಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ , ಅಂತಹ ಕಡೆಗಳಲ್ಲಿ ಹೊಸ ಪೈಪ್ ಲೈನ್ ಅಳವಡಿಸಿ ಕುಡಿಯುವ ನೀರಿಗೆ ಯಾವುದೇ ಕುಂದುಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್, ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸಂಜೀವ, ಕಂದಾಯ ನಿರೀಕ್ಷಕರುಗಳಾದ ವಿಜಯ್ ಮತ್ತು ಜನಾರ್ಧನ ಹಾಗೂ ಗ್ರಾಮ ಕರಣೀಕ ನಾಗರಾಜ್ ಮತ್ತಿತರ ಪ್ರಮುಖರು ಹಾಜರಿದ್ದರು

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಜ್ಮಿ ಉಪಸ್ಥಿತರಿದ್ದರು

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...