Tuesday, February 3, 2026

ಮಂಗಳೂರು ವಿಶ್ವವಿದ್ಯಾಲಯದ 10ನೇ ಕುಲಪತಿಯಾಗಿ ಡಾ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬಹುನಿರೀಕ್ಷಿತ “ಕುಲಪತಿ” ಹುದ್ದೆಗೆ ಮಂಗಳೂರು ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ|ಪಿ.ಎಲ್‌.ಧರ್ಮ ಅವರನ್ನು ನೇಮಕಗೊಳಿಸಿ ರಾಜ್ಯಪಾಲರ ಸಚಿವಾಲಯ ಆದೇಶಿಸಿದೆ.

ನೂತನ ಕುಲಪತಿ ಪ್ರೊ|ಪಿ.ಎಲ್‌.ಧರ್ಮ ಅವರು ಮಂಗಳವಾರ ಸಂಜೆ ವಿವಿ ಪ್ರಭಾರ ಕುಲಪತಿ ಪ್ರೊ| ಜಯರಾಜ್‌ ಅಮೀನ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿಯಾಗಿದ್ದರು. ಅಲ್ಲಿಂದ ಕುಲಪತಿ ಹುದ್ದೆ ಖಾಲಿ ಇತ್ತು. ಜೂ.2ರಂದು “ಪ್ರಭಾರ ಕುಲಪತಿ’ಯಾಗಿ ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಅಧಿಕಾರದಲ್ಲಿದ್ದರು.

 

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...