Wednesday, February 12, 2025

ದ.ಕ. ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ

ಮಂಗಳೂರು: ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶನಿವಾರ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಆದೇಶ ಹೊರಡಿಸಿದ್ದಾರೆ.

ಶನಿವಾರದಿಂದ ಸೋಮವಾರದವರೆಗೆ ಪ್ರತಿದಿನ 200 ಮಿಲಿ ಮೀಟರ್ ಗಿಂತ ಮೇಲ್ಪಟ್ಟು ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಭಾರಿ ಮಳೆಯ ಹಿನ್ನಲೆಯಲ್ಲಿ ತುರ್ತು ಸೇವೆಗಾಗಿ ಟೋಲ್‌ ಫ್ರೀ ಸಂಖ್ಯೆ ನೀಡಲಾಗಿದೆ. ತುರ್ತು ಸೇವೆಯ ಕಂಟ್ರೋಲ್‌ ರೂಮ್‌ 24*7 ಕಾರ್ಯನಿರ್ವಹಿಸಲಿದೆ.

ಕಂಟ್ರೋಲ್‌ ರೂಮ್‌ – 1077

ವ್ಯಾಟ್ಸಪ್‌ ಸಂಖ್ಯೆ; 9483908000

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...