Thursday, January 29, 2026

ಬಸ್‌‌ನ ಸೀಟಿನಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

ಮಂಗಳೂರು: ಬಸ್‌‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ.

ಪಾರ್ವತಮ್ಮ ಗಾಯಗೊಂಡ ಮಹಿಳೆ ಎಂದು ತಿಳಿದುಬಂದಿದೆ.

ಮಹಿಳೆಯು ತನ್ನ ಪತಿ ಮತ್ತು ಮೊಮ್ಮಗನೊಂದಿಗೆ ಮಂಗಳೂರಿನ ಆಸ್ಪತ್ರೆಗೆಂದು ಬಂದು ವಾಪಸ್ ಉಡುಪಿಗೆ ಹೋಗುತ್ತಿದ್ದರು. ಈ ವೇಳೆ ಬಸ್ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ತಲುಪಿದಾಗ ಬಸ್ ಚಾಲಕ ಹಂಪ್ಸ್ ಗಮನಿಸದೇ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬಸ್‌‌ನ ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ ಪಾರ್ವತಮ್ಮ ಅವರು ಬಸ್ಸಿನೊಳಗೆ ಬಿದ್ದು ಸೋಂಟ ಮತ್ತು ಬೆನ್ನು ಮೂಳೆ ಮುರಿತದ ಗಾಯವಾಗಿದೆ.

ಇನ್ನು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಂಗಳೂರು ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...