Friday, June 27, 2025

ಫ್ರೀ ಬಸ್​ ಹತ್ತಿ ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಮಂಗಳೂರಿಗೆ ಬಂದ ಹುಬ್ಬಳ್ಳಿ ಮಹಿಳೆ

ಮಂಗಳೂರು: ಪ್ರಿಯಕರನನ್ನು ನೋಡಲು ಫ್ರೀ ಬಸ್​​ನಲ್ಲಿ ಬಂದ ಪ್ರಿಯತಮೆ ನಾಪತ್ತೆಯಾಗಿರುವ ಘಟನೆ ಪುತ್ತರಿನಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯು ಹುಬ್ಬಳ್ಳಿ ನಿವಾಸಿಯಾಗಿದ್ದು, ಈಕೆಗೆ 11 ತಿಂಗಳ ಮಗು ಇದೆ. ವಿವಾಹಿತ ಮಹಿಳೆ ಹಾಗೂ ಪುತ್ತೂರಿನ ಯುವಕನ ನಡುವೆ ಪ್ರೀತಿ ಶುರುವಾಗಿತ್ತು. ಆದರೆ ಯುವತಿಯ ಕುಟುಂಬಸ್ಥರು ಬೇರೆ ಯುವಕನ ಜೊತೆ ಮದುವೆ ಮಾಡಿಸಿದ್ದಾರೆ.

ಗಂಡನ ಮನೆಯಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಮನೆಯಿಂದ ಹೊರ ಹೋಗಿದ್ದ ಮಹಿಳೆಯು ಆಧಾರ್ ಕಾರ್ಡ್ಅನ್ನು ಬಸ್ಸಿನಲ್ಲಿ ತೋರಿಸಿ ಉಚಿತವಾಗಿ ಹುಬ್ಬಳ್ಳಿಯಿಂದ ಪುತ್ತೂರಿಗೆ ಪ್ರಯಾಣಿಸಿದ್ದಾಳೆ. ವಿಷಯ ತಿಳಿದ ಕೂಡಲೇ ಆಕೆಯ ಗಂಡನ ಮನೆಯವರು ಹಾಗೂ ಮಹಿಳೆಯ ಮನೆಯವರು ರಾತ್ರೋ ರಾತ್ರಿ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಈ ಘಟನೆ ಸಂಬಂಧ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಎಂಬುವವರು, ಎಸ್ಕೇಪ್​​ ಆಗಿದ್ದ ವಿವಾಹಿತ ಮಹಿಳೆಯ ಕುಟುಂಬಸ್ಥರಿಗೆ ಧೈರ್ಯ ಹೇಳಿ, ನೆರವು ನೀಡಿದ್ದಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...