Friday, July 11, 2025

ಅಪಘಾತ ವಿಚಾರವಾಗಿ ಇತ್ತಂಡದ ನಡುವೆ ಮಾತಿನ ಚಕಮಕಿ: ಪೊಲೀಸರಿಂದ ಲಾಠಿ ಚಾರ್ಜ್

ವಿಟ್ಲ: ಮಾಣಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ವಿಚಾರವಾಗಿ ಇತ್ತಂಡದ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಈ ಘಟನೆ ಸಂಭವಿಸಿದೆ. ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಶಿಪ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಘಟನೆ ಬಗ್ಗೆ ಎರಡು ಕಾರಿಗೆ ಸಂಬಂಧಪಟ್ಟವರ ನಡುವೆ ವಾದವಿವಾದ ನಡೆದು ಮಾತಿನ ಚಕಮಕಿ ನಡೆದಿದೆ. ಬಳಿಕ ಇತ್ತಂಡದವರು ಪರಸ್ಪರ ಹಲ್ಲೆಗೆ ಮುಂದಾಗಿದ್ದರು ಎಂದು ಪ್ರತ್ಯಕ್ಷಿ ದರ್ಶಿಗಳು ತಿಳಿಸಿದ್ದಾರೆ.

ಘಟನೆ ತಾರಕಕ್ಕೇರುತ್ತಿದ್ದಂತೆ ಇತ್ತಂಡದ ಜನರು ಜಮಾಯಿಸಿ, ಉದ್ವಿಗ್ನದ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳದಲ್ಲಿ ನೂರಕ್ಕಿಂತಲೂ ಅಧಿಕ ಮಂದಿ ಜಮಾಯಿಸಿದರು.‌

ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ವಿಟ್ಲ‌ ಪೊಲೀಸರು ನಿಯಂತ್ರಿಸಲು ಲಾಠಿ ಬೀಸಿದರು. ಬಳಿಕ ಜನರು ದಿಕ್ಕಾಪಾಲಾಗಿ ಓಡಿದರು. ಬಳಿಕ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದುಕೊಂಡು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಈ ಎರಡು ವಾಹನಗಳು ವಿಭಿನ್ನ ಕೋಮಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...