Wednesday, January 28, 2026

ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ 54ನೇ ವಾರ್ಷಿಕ ಜಾತ್ರೋತ್ಸವ

ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಆಂಜನೇಯ ಶ್ರೀ ಕಾಳಿಕಾಂಬ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ 54ನೇ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವವು ನಾನಾ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಗಣಪತಿ, ಶ್ರೀ ಆಂಜನೇಯ, ಶ್ರೀ ಶಿವ ಸಿರಿ ಕುಮಾರ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆದವು.
ಕ್ಷೇತ್ರದಲ್ಲಿ ನಾನಾ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ತುಲಾಭಾರ ಸೇವೆ, ಕಲಶ ಸ್ನಾನ, ಮಹಾಪೂಜೆ, ಬಲಿ ಉತ್ಸವ, ಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀ ದೇವಿಯ ಮಹಾಪೂಜೆ, ನಾಗ ದರ್ಶನ, ಬಲಿ ಉತ್ಸವ ಪಲ್ಲಕ್ಕಿ ಉತ್ಸವ, ಸಿಡಿ ಮದ್ದುಪ್ರದರ್ಶನ, ರಕ್ತೇಶ್ವರಿ ದೈವದ ನೇಮೋತ್ಸವ, ಶ್ರೀ ಆಂಜನೇಯ ಸೇವೆ, ಶ್ರೀ ದೇವಿಯ ದರ್ಶನ ಬಲಿ ಉತ್ಸವ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಸ್ಥಳೀಯ ಮಕ್ಕಳ ನೃತ್ಯ ವೈವಿಧ್ಯ, ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ ’ಒರಿಯರ್ದೊರಿ ಅಸಲ್’ ತುಳು ಸಾಮಾಜಿಕ ನಾಟಕ ಪ್ರದರ್ಶನ, ಶ್ರೀವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಕೇಂದ್ರ ಮಂಜನಾಡಿ ಇವರಿಂದ ಬಿರ್ದ್‌ದ ಬೀರೆ ಅಭಿಮನ್ಯು ಎಂಬ ತುಳು ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

 ರಕ್ತೇಶ್ವರಿ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶ್ರೀರಕ್ತೇಶ್ವರಿ ದೈವದ ಕೆಂಡ ನರ್ತನ ಸೇವೆ ನಡೆಯಿತು.

 

 

 

More from the blog

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...