Monday, January 26, 2026

ಮಾ.5ರಿಂದ ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ : ಇಂದು ಸಮಿತಿ ರಚನಾ ಸಭೆ

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಮಾ.5ರಿಂದ ಮಾ.10ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ದೇಗುಲ ನಿರ್ಮಾಣವೆಂದರೆ ಧರ್ಮ, ಸಂಸ್ಕ್ರತಿಯ ಅನಾವರಣವಾಗಿದೆ. ಬ್ರಹ್ಮಕಲಶೋತ್ಸವ ಧರ್ಮ ಸಂರಕ್ಷಣೆಯ ಕಾರ್ಯವೂ ಆಗಿದೆ. ಸುವಸ್ತುಗಳನ್ನು ಸಮರ್ಪಿಸಿ ಸೇವೆ ಸಲ್ಲಿಸುವ ಅವಕಾಶ ಇದಾಗಿದೆ. ಭವ್ಯತೆಯ ಸೃಷ್ಟಿಗೆ ದಿವ್ಯ ದೃಷ್ಟಿ ಬೇಕು. ತಾಯಿಯ ಸೇವೆಗೆ ಯಾರೂ ಸೇರಿಕೊಳ್ಳಬಹುದು. ಅನ್ನದಾನ ವ್ಯವಸ್ಥಿತವಾಗಿರಬೇಕು. ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಅತಿಥಿಗಳ ಉಪಚಾರ ಉತ್ತಮವಾಗಿರಬೇಕು. ಅರ್ಥಿಕ ಕ್ರೋಡೀಕರಣ, ಮಹಿಳೆಯರು ಯುವಕರ ತಂಡಗಳ ತಯಾರಾಗಬೇಕು. ಶಿಸ್ತು ಸಂಯಮ ಇದ್ದ ಸಂಘಟನೆ ಯಶಸ್ವಿಯಾಗುತ್ತದೆ ಎಂದರು.

ಶ್ರೀ ಕ್ಷೇತ್ರ ಕುಕ್ಕಾಜೆಯ ಶ್ರೀಕೃಷ್ಣ ಗುರೂಜಿ ಮಾತನಾಡಿ ಸಾನ್ನಿಧ್ಯದ ಕಾಳಿಕಾಂಬೆ, ಆಂಜನೇಯರ ಇಚ್ಛೆಯಂತೆ, ನಿಮ್ಮೆಲ್ಲರ ಪ್ರೀತಿ,ಭಕ್ತಿ, ಸಹಕಾರದಿಂದ ದೇಗುಲ ಜೀರ್ಣೋದ್ಧಾರಗೊಂಡಿದೆ. ಪ್ರಾಂಜಲ ಮನಸ್ಸಿನ ಭಕ್ತರ ಸರ್ವರೀತಿಯ ಸೇವೆಯಿಂದ ಬ್ರಹ್ಮಕಲಶೋತ್ಸವ ಸಾಂಗವಾಗಿ ನೆರವೇರಲಿದೆ ಎಂದರು.

ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಕೆ.ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು.

ಯತೀಶ್ ಆಳ್ವ ಏಳ್ನಾಡುಗುತ್ತು, ವಿಟ್ಲ ಬಿಲ್ಲವ ಸಂಘದ ಬೆಳ್ಳಿಹಬ್ಬ ಸಂಭ್ರಮ ಸಮಿತಿ ಅಧ್ಯಕ್ಷ ಡಾ.ಗೀತಪ್ರಕಾಶ್, ನಿವೃತ್ತ ಮುಖ್ಯೋಪಾಧ್ಯಾಯ ಲಕ್ಷ್ಮಣ ನಾಯ್ಕ ಕಣ್ಣಕಜೆ, ಅಶೋಕ ಶೆಟ್ಟಿ ಬಿರ್ಕಾಪು, ಸದಾಶಿವ ಶೆಟ್ಟಿ ಬೀಡಿನಬೈಲು, ಶೀನ ನಾಯ್ಕ ಅಡ್ಯನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪುರುಷೋತ್ತಮ ಕಾರ್ಯಾಡಿ, ಐತ್ತಪ್ಪ ಪೂಜಾರಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸೇವಾ ಪ್ರತಿನಿಧಿ ಗುಲಾಬಿ ಎನ್., ಹರೀಶ್ ಮಣಿಯಾಣಿ ತಚ್ಚಮೆ, ವಿಠಲ ಶೆಟ್ಟಿ ಸುಣ್ಣಂಬಳ,ಶ್ರೀಧರ ಬಾಳೆಕಲ್ಲು ಸ್ವಾಗತಿಸಿದರು. ದಿನೇಶ್ ರಾಯಿ ಉಪಸ್ಥಿತರಿದ್ದರು.

ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಒಡಿಯೂರು ಶ್ರೀ, ಮಾಣಿಲಶ್ರೀ, ಕಣಿಯೂರುಶ್ರೀ ಅವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...