Wednesday, February 12, 2025

ಅಕ್ರಮ ಮರಳು ಅಡ್ಡೆಗೆ ಎ.ಎಸ್.ಪಿ.ಸೈದುಲು ಅಡಾವತ್ ದಾಳಿ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳ ವಶ

ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಎ.ಎಸ್.ಪಿ.ಸೈದುಲ್ ಅಡಾವತ್ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳ ವಶಪಡಿಸಿಕೊಂಡ ಘಟನೆ ಪುದು ಗ್ರಾಮದ ಸುಜೀರ್ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಬಂಟ್ವಾಳ ತಾಲೂಕು ಪುದು ಗ್ರಾಮದ ಸುಜೀರ್ ಎಂಬಲ್ಲಿ ಹಿಟಾಚಿ ಮತ್ತು ಟಿಪ್ಪರ್ ಗಳನ್ನು ಬಳಸಿ ನೇತ್ರಾವತಿ ನದಿಯ ಹಿನ್ನೀರಿನಿಂದ ಅಕ್ರಮವಾಗಿ ಮರಳು ತೆಗೆದು ಅದನ್ನು ಫಿಲ್ಟರ್ ಮಾಡಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಎ.ಎಸ್.ಪಿ.ತಂಡ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಗೆ ಹಸ್ತಾಂತರ ಮಾಡಲಾಗಿದೆ.

ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ 3 ಟಿಪ್ಪರ್ ಲಾರಿಗಳು ಇದರ ಅಂದಾಜು ಮೌಲ್ಯ 24,00,000/-, L & T ಕಂಪೆನಿಯ ಒಂದು ಹಿಟಾಚಿ ಇದರ ಅಂದಾಜು ಮೌಲ್ಯ 55,00,000/-, Kobelco ಕಂಪೆನಿಯ ಒಂದು ಹಿಟಾಚಿ, ಇದರ ಅಂದಾಜು ಮೌಲ್ಯ 80,00,000/-, ಒಂದು ಗ್ರೀನ್ ವಿಕ್ ಕಂಪೆನಿಯ ಜನರೇಟರ್ ಇದರ ಅಂದಾಜು ಮೌಲ್ಯ 6,00,000/-, ಮರಳು ಫಿಲ್ಟರ್ ಮಾಡುವ ಯುನಿಟ್ ಇದರ ಅಂದಾಜು ಮೌಲ್ಯ 80,000/-, 35 ಲೋಡ್ ಮರಳು ಇದರ ಅಂದಾಜು ಮೌಲ್ಯ 1,10,000/- ಗಳನ್ನು ವಶಕ್ಕೆ ಪಡೆದಿದ್ದು, ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿರುತ್ತದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 1 ಕೋಟಿ 65 ಲಕ್ಷ ಆಗಿರುತ್ತದೆ.

ದಾಳಿಯನ್ನು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಸೈದುಲ್ ಅದಾವತ್ ರವರ ತಂಡ ನಡೆಸಿದ್ದು, ಬಂಟ್ವಾಳ ವೃತ್ತ ನಿರೀಕ್ಷಕರಾದ ಶರಣೆ ಗೌಡ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ. ಎಂ.ಎಸ್, ಸಿಬ್ಬಂದಿಯವರುಗಳಾದ ಹನುಮಂತ, ಉಮೇಶ, ಕುಮಾರ್, ನಝೀರ್, ನಾಗನಾಥ್, ಅಜಿತ್ ಬಂಗೇರಾ, ಕಿರಣ್ ಪಾಲ್ಗೊಂಡಿರುತ್ತಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...