Thursday, January 29, 2026

ತೌಹಿದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ,  ಸನ್ನದು ಪ್ರಧಾನ ಸಮಾರಂಭ. 

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ತೌಹಿದ್ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳದಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಪರೀಕ್ಷೆ ತಯಾರಿ ಕಾರ್ಯಾಗಾರವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಜೇಸೀ ವಲಯ ತರಬೇತುದಾರ ಉಮೇಶ್ ನಿರ್ಮಲ್ ಮತ್ತು ಸಂಪನ್ಮೂಲ ವ್ಯಕ್ತಿ ಗೋಪಾಲ ಅಂಚನ್ ನಡೆಸಿಕೊಟ್ಟರು.
ನೂತನವಾಗಿ ಆರಂಭವಾದ ತೌಹಿದ್ ಆಂಗ್ಲ ಮಾಧ್ಯಮ ಶಾಲೆಯ  ಇಂಟರಾಕ್ಟ್  ಕ್ಲಬ್ ಗೆ ಸನ್ನದು ಪ್ರಧಾನ ಮಾಡಲಾಯಿತು. ಸಮಾರಂಭದಲ್ಲಿ ಶಾಲಾ ಸಂಚಾಲಕರಾದ ಮಹಮ್ಮದ್ ಸಗೀರ್, ಅಧ್ಯಕ್ಷರಾದ ಬಿ.ಎ ಸುಲೇಮಾನ್, ಕಾರ್ಯದರ್ಶಿ ಬಿ ಎ ಮಹಮ್ಮದ್, ಶಾಲಾ ಮುಖ್ಯೋಪಾಧ್ಯಾಯಿನಿ ಮೆಟಿಲ್ಡಾ ಡಿಕೋಸ್ತ, ಇಂಟರಾಕ್ಟ್ ಸಂಯೋಜಕಿ ರಚನ
ಉಪಸ್ತಿತರಿದ್ದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್, ನಿರ್ದೇಶಕರಾದ ಮಹಮ್ಮದ್ ಹನೀಫ್, ಮಹಮ್ಮದ್ ಮುನೀರ್ , ಶನ್ ಪತ್ ಷರೀಪ್ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿಗಳಾದ ರಶ್ಮಿ ಸ್ವಾಗತಿಸಿ ಜಶೀಲ ಪರ್ವಿನ್ ವಂದನಾರ್ಪಣೆ ಮಾಡಿದರು.

More from the blog

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...