Tuesday, January 27, 2026

ಜಿಲ್ಲೆಯಲ್ಲಿ ನಾಳೆಯಿಂದ ದಿನಸಿ ಅಂಗಡಿಗಳು 12 ಗಂಟೆಯವರೆಗೆ ಓಪನ್

ದ.ಕ. ಜಿಲ್ಲೆಯ ಜನರಿಗೆ ಎಲ್ಲ  ಅಗತ್ಯ ವಸ್ತುಗಳು ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಲಭ್ಯವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಎರಡು ದಿನಗಳ ಸಂಪೂರ್ಣ ಬಂದ್ ಬಳಿಕ ಮಂಗಳವಾರದಂದು ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಬುಧವಾರದ ಬಳಿಕ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ.

ಇನ್ನು ಬುಧವಾರದಿಂದ ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂಬುವುದಾಗಿ ಸಚಿವರು ತಿಳಿಸಿದ್ದಾರೆ.

ಮಂಗಳವಾರದಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದ ಸಂದರ್ಭ ಜನರು ಮಂಗಳೂರು ನಗರದಾದ್ಯಂತ ಮುಗಿಬಿದ್ದು ಖರೀದಿಯಲ್ಲಿ ತೊಡಗಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಜನರು ವಿಫಲರಾಗಿದ್ದರು. ಎರಡು ದಿನಗಳ ಕಾಲ ಬಂದ್ ಇದ್ದ ಪರಿಣಾಮ ಜನರು ಮಂಗಳವಾರ ಮುಗಿಬಿದ್ದು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು.

ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆ, ಕದ್ರಿ ಮಾರುಕಟ್ಟೆ, ಮಲ್ಲಿಕಟ್ಟೆ ಮಾರುಕಟ್ಟೆ ಸೇರಿದಂತೆ ಹಲವು ಮಾರುಕಟ್ಟೆಗಳಲ್ಲಿ ಮುಗಿಬಿದ್ದು ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬುಧವಾರದಿಂದ ಮಧ್ಯಾಹ್ನದ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

More from the blog

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...