Tuesday, January 27, 2026

ಮಸೀದಿ ಜಮೀನು ವಿವಾದ ಅಳತೆಯ ವೇಳೆ ಎಸ್.ಐ.ಗಳ ಮೇಲೆ ಹಲ್ಲೆಗೆ ಯತ್ನ: ಲಾಠಿ ಚಾರ್ಜ್ ಒರ್ವನ ವಶಕ್ಕೆ

ಬಂಟ್ವಾಳ: ಅಕ್ಕರಂಗಡಿ ಜುಮಾ ಮಸೀದಿ ಗೆ ಸಂಬಂಧಪಟ್ಟ ಜಮೀನನ್ನು ಅನೆಕ್ಷರ್ ಜಿ ಪ್ರಕಾರ ಸರ್ವೆ ಕಾರ್ಯ ಮಾಡುವ ವೇಳೆ ಎಸ್.ಐ.ಗಳಿಬ್ಬರ ಮೇಲೆ ಗುಂಪಿನಿಂದ ಹಲ್ಲೆ ಗೆ ಯತ್ನ ಒರ್ವನ ಬಂಧನ ಹಾಗೂ ಲಾಠಿ ಚಾರ್ಜ್ ಮಾಡಿದ ಘಟನೆ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.


ಬಂಟ್ವಾಳ ‌ನಗರ ಠಾಣಾ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಹಾಗೂ ಗ್ರಾಮಾಂತರ ಎಸ್.ಐ.ಪ್ರಸನ್ನ ಅವರ ಮೇಲೆ ಜಮೀನಿನ ಅಳತೆಯ ವೇಳೆ ಹಲ್ಲೆ ಗೆ ಮುಂದಾದಾಗ ಗುಂಪಿನ ಮೇಲೆ ಲಾಠಿ ಪ್ರಹಾರ ನಡೆಸಿ ದ್ದಾರೆ.
ಕೆಲ ಹೊತ್ತು ಇಲ್ಲಿ ಗೊಂದಲದ ಪರಿಸ್ಥಿತಿ ಕೂಡಾ ನಿರ್ಮಾಣ ವಾಗಿತ್ತು.
ಜಮೀನಿನ ಅಳತೆಯ ವೇಳೆ ಕಾನೂನು ಸುವ್ಯವಸ್ಥೆ ಗೆ ಭಂಗ ಬರುತ್ತದೆ ಸಾದ್ಯತೆ ಗಳಿವೆ ಎಂಬ ಕಾರಣ ಕ್ಕಾಗಿ ಹೆಚ್ಚುವರಿ ಪೋಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.
ಅಳತೆಯ ವೇಳೆ ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ , ಬಂಟ್ವಾಳ ವ್ರತ್ತ ನಿರೀಕ್ಷಕ ಶರಣ್ ಗೌಡ, ಹಾಗೂ ನಗರ ಠಾಣಾ ಎಸ್. ಐ.ಚಂದ್ರಶೇಖರ್, ಗ್ರಾಮಾಂತರ ಎಸ್.ಐ.‌ಪ್ರಸನ್ನ, ಟ್ರಾಫಿಕ್ ಎಸ್.ಐ.ಮಂಜುನಾಥ ಅವರು ಸ್ಥಳದಲ್ಲಿದ್ದು ಹೆಚ್ಚಿನ ಕ್ರಮ ಕೈಗೊಂಡಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...