Friday, June 27, 2025

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ: ತಪ್ಪಿದಲ್ಲಿ ದಂಡ

ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಕೊರೊನಾ ಪೀಡಿತರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಹಾಕದಿದ್ದರೆ ದಂಡ ಎಂಬ ನಿಯಮವನ್ನು ಈಗಾಗಲೇ ಕೆಲವು ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಕೂಡ ಅದೇ ನಿರ್ಧಾರಕ್ಕೆ ಬಂದಿದೆ.

ಜನತೆಯ ಸುರಕ್ಷತೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಬೇಕು ಎನ್ನುವ ನಿಯಮವನ್ನು ಉಲ್ಲಂಘಿಸಿದವರಿಗೆ 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕು ತಗುಲಿರಬಹುದು ಎನ್ನುವ ಸಂದೇಹದ ಮೇಲೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾದ ನಂತರ ಶಂಕಿತ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬರದೆ ಇದ್ದಲ್ಲಿ, ಅಂತಹವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಬಹುದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆದೇಶ ಹೊರಡಿಸಿದ್ದು, ಒಂದು ವಾರದ ಬಳಿಕ ಸೋಂಕಿನ ಲಕ್ಷಣಗಳಿಲ್ಲದ ವ್ಯಕ್ತಿಯನ್ನು ಆರ್.ಟಿ.ಪಿ.ಸಿ.ಆರ್ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯವಿಲ್ಲ, ಕೇವಲ ಥರ್ಮಲ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಟೈನ್‌ಗೆ ಒಳಪಡಿಸಬಹುದು ಎಂದು ತಿಳಿಸಲಾಗಿದೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...