Sunday, June 29, 2025

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ವತಿಯಿಂದ ಮಾಸ್ಕ್ ದಿನಾಚರಣೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ನೇತೃತ್ವದಲ್ಲಿ ಮಾಸ್ಕ್ ದಿನಾಚರಣೆಯ ನಡಿಗೆ ಕಾರ್ಯಕ್ರಮ ಬಿ.ಜೆ.ಪಿ ಕಚೇರಿಯಿಂದ ನಾರಾಯಣ ಗುರು ವೃತ್ತದವರೆಗೆ ನಡೆಯಿತು.

ಈ ಜಾಥದಲ್ಲಿ ನೂರಾರು ಬಿ.ಜೆ.ಪಿ ಕಾರ್ಯಕರ್ತರು ಭಾಗಿಯಾಗಿದ್ದರು, ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಕೋವಿಡ್-19 ನಿಯಂತ್ರಣಕ್ಕೆ ಜನತೆ ಮಾಸ್ಕ್‌ನ್ನು ಕಡ್ಢಾಯವಾಗಿ ಧರಿಸಿ ಸಾಮಾಜಿಕ ಅಂತರ ಕಾಯ್ದು ಕೊಳ್ಳವ ಮೂಲಕ ಕೋರೋನವನ್ನು ನಿಯಂತ್ರಿಸಬಹುದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾಗೂ ಆರ್‍ಯೋಗ ಇಲಾಖೆ ಮಾರ್ಗ ಸೂಚಿಯನ್ನಯ ಪಾಲನೆ ಮಾಡಬೇಕು. ರಾಜ್ಯ ಸರ್ಕಾರ ಇದೀನ ಮಾಸ್ಕ್ ದಿನಾಚರಣೆ ಮಾಡುವ ಮೂಲಕ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಪಕ್ಷದ ವತಿಯಿಂದ ಈ ನಡಿಗೆ ಕಾರ್ಯಕ್ರಮವನ್ನು ನಡೆದಿದೆ ಎಂದರು.

ರಾಜ್ಯ ಕ್ಲಿಯೊನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡುತ್ತಾ, ಕೊವೀಡ್-19 ಮಹಾಮಾರಿ ವಿರುದ್ದ ಮಾಸ್ಕ್ ಧರಿಸುವ ಮುಖಾಂತರ ಜಾಗೃತಿ ಮೂಡಿಸುವಂತ ಕೆಲಸ ಆಗಬೇಕಾಗಿದೆ. ಆ ನಿಟ್ಟಿನಲ್ಲಿ ಜನತೆ ಸಂಪೂರ್ಣ ಸಹಕಾರ ನೀಡಬೇಕೆಂದರು. ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಜಿಲ್ಲಾ ಮೋರ್ಚಾಗಳ ಡಿಜಿಟಲ್ ಸಂಚಾಲಕ ಸಂದೇಶ್ ಶೆಟ್ಟಿ, ಪ್ರ.ಕಾರ್ಯದಶಿ ಯಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ರಮನಾಥ ರಾಯಿ, ಗಣೇಶ್ ರೈ, ಪುರುಷೋತ್ತಮ ಶೆಟ್ಟಿ, ಪ್ರಕಾಶ್ ಅಂಚನ್, ಯಶೋಧರ ಕರ್ಬೆಟು, ಮೋನಪ್ಪ ದೇವಸ್ಯ, ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಭಾರತಿ ಚೌಟ, ಚಂದ್ರಾವತಿ ಪೊಳಲಿ, ಹಾಗೂ ಕ್ಷೇತ್ರ ಪದಾಧಿಕಾರಿಗಳು, ಕ್ಷೇತ್ರ ಮೋರ್ಚಾಗಳ ಅಧ್ಯಕ್ಷ, ಪ್ರ.ಕಾರ್ಯದಶಿಗಳು, ಶಕ್ತಿ ಕೇಂದ್ರದ ಪ್ರಮುಖರು, ಹಾಗೂ ವಿವಿಧ ಜವಾಬ್ದಾರಿ ಇರುವ ಪ್ರಮುಖರು, ಜನಪ್ರತಿನಿದಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

More from the blog

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...