Wednesday, February 12, 2025

ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ : ವಾಲಿಬಾಲ್ ವಿಭಾಗದಲ್ಲಿ ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ತಂಡ ಪ್ರಥಮ ಸ್ಥಾನ

ದ.ಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇದರ ವತಿಯಿಂದ ಉಜಿರೆ SDM ಕಾಲೇಜ್ ನಲ್ಲಿ ನಡೆದ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ತಂಡ ವಾಲಿಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ.

ಒಟ್ಟು ಎಂಟು ತಂಡಗಳು ಭಾಗವಹಿಸಿದ ಈ ಪಂದ್ಯಾಟದಲ್ಲಿ ಬೆಳ್ತಂಗಡಿ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ

ಸತತ ಹದಿನೈದು ವರ್ಷಗಳಿಂದ ಬಂಟ್ವಾಳ ತಂಡ ಚಾಂಪಿಯನ್ನಾಗಿ ಮೂಡಿಬಂದಿರುತ್ತದೆ, ತಂಡದಲ್ಲಿ ಕಪ್ತಾನ ರಫೀಕ್ ನಾರ್ಶಾ.ಪ್ರಶಾಂತ್ ಜೆಮ್ ,ಚಂದ್ರಹಾಸsvs ರಾಘವೇಂದ್ರ ಸಾಲೆತ್ತೂರು, ಮಿಥುನ್ ಮೊಡಂಕಾಪು, ಜಗದೀಶ್ ತುಂಬೆ,ಸುರೇಶ್ ಕಾರ್ಮೆಲ್, ಅಜಿತ್ ಶಾರದಾ, ನಿಖಿಲ್ ಕೈರಂಗಳ, ದೀಪಕ್ ಬುಡೋಳಿ, ತಿರುಮಲೇಶ್ ಹೋರಿಜಾನ್, ಪದ್ಮನಾಭl ಲೋರೆಟ್ಟು, ಸಫ್ವನ್ ಜೆನಿತ್ ಭಾಗವಹಿಸಿದ್ದರು. ವಿಜೇತ ತಂಡಕ್ಕೆತಾಲೂಕ್ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ತಾಲೂಕ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಜೇಂದ್ರ ರೈ ಅಳಿಕೆ ಮತ್ತು ಬಂಟ್ವಾಳ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಅಧ್ಯಕ್ಷರಾದ ಸುಪ್ರೀತ್ ಆಳ್ವಾ ಅಭಿನಂದನೆ ಸಲ್ಲಿಸಿದ್ದಾರೆ

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...