Thursday, June 26, 2025

ಮತದಾನದ ಹಕ್ಕು ದೇಶದ ನಾಗರೀಕರಿಗೆ ಸಿಕ್ಕಿದ ದೊಡ್ಡ ಗೌರವ: ತಹಶಿಲ್ದಾರ್ ರಶ್ಮಿ .ಎಸ್.ಆರ್

ಬಂಟ್ವಾಳ : ಮತದಾನದ ಹಕ್ಕು ದೇಶದ ನಾಗರೀಕರಿಗೆ ಸಿಕ್ಕಿರುದ ದೊಡ್ಡ ಗೌರವ, ಇದನ್ನು ಮನನ ಮಾಡಿಕೊಂಡು ನಿಷ್ಠೆ ಹಾಗೂ ಜವಬ್ದಾರಿಯಿಂದ ಚಲಾಯಿಸಬೇಕು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ಹೇಳಿದರು.

ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾನ ಪ್ರಕ್ರಿಯೆಯ ಅಕ್ರಮದಲ್ಲಿ ಭಾಗವಹಿಸುವವರ ಬಗ್ಗೆಯೂ ಇಲಾಖೆಗೆ ಮಾಹಿತಿ ನೀಡಿ‌ ಅಂತವರ ವಿರುದ್ಧವೂ ಜಾಗೃತರಾಗಬೇಕಾಗಿದೆ ಎಂದರು.

ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿ ಗಳು ಮತದಾನ, ಪ್ರಜಾಪ್ರಭುತ್ವ ಹಾಗೂ ಮತದಾರರ ಬಗ್ಗೆ ತಿಳಿದುಕೊಂಡ ವಿಚಾರಗಳನ್ನು ಮತ್ತಷ್ಟು ಮಂದಿಗೆ ತಿಳಿಸುವಂತಾಗಬೇಕುಎಂದು ಅವರು ಹೇಳಿದರು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮಾತನಾಡಿ, ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಮತದಾನ ಹಾಗೂ ಸಂಸದೀಯ ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆ ತಿಳಿಸಿದಾಗ, ಮುಂದಿನ ಹಂತದಲ್ಲಿ ಪ್ರಜ್ಞಾವಂತ ಸಮಾಜ‌ ನಿರ್ಮಾಣವಾಗಲು ಸಾಧ್ಯ ಎಂದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿ, ಮತದಾನ ಹಕ್ಕು ಕುರಿತಾಗಿ‌ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಇ‌ಂದಿನ ಅಗತ್ಯ ಎಂದರು.

ಇದೇ ಸಂದರ್ಭ ಮತದಾರರ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಸ್ವೀಪ್ ಸಮಿತಿ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ಹೊಸ ಮತದಾರರಿಗೆ ಡಿಜಿಟಲ್ ಗುರುತಿನ ಚೀಟಿಯನ್ನು ಇದೇ ಸಂದರ್ಭ ವಿತರಿಸಲಾಯಿತು.

ಕ್ಷೇತ್ರ ಸಂಯೋಜಕಿ ಸುಜಾತ ಕುಮಾರಿ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ‌ ನಿರ್ವಹಿಸಿದರು.

ಚುನಾವಣೆ ಶಿರಸ್ತೇದಾರ್ ರಾಜೇಶ್ ನಾಯ್ಕ್, ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕರಾದ ರಾಜ್ ಕುಮಾರ್, ಕಾರ್ತಿಕ್, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...