Monday, July 14, 2025

ಪಕಳಬೆಟ್ಟುವಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ: ನಾವೂರ ಗ್ರಾಮದ ಪಕಳಬೆಟ್ಟು ಪರಿಸರದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಮತಯಾಚನೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಿ.ಜೆ.ಪಿ ನಳಿನ್ ಕುಮಾರ್ ಕಟೀಲು ಅವರಿಗೆ ಅಮೂಲ್ಯವಾದ ಮತವನ್ನು ನೀಡಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಮಂತ್ರಿಯನ್ನು ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ನಂತರ ಜಗತ್ತಿನಲ್ಲಿ ಭಾರತಕ್ಕೆ ವಿಶ್ವಗುರು ಸ್ಥಾನ ಸಿಕ್ಕಿದೆ. ನರೇಂದ್ರ ಮೋದಿಯವರ ಉಜ್ವಲ ಆಯುಷ್ಮಾನ್ ಇನ್ನಿತರ ಯೋಜನೆಗಳು ಜನಸಾಮಾನ್ಯರಿಗೆ ಸಹಕಾರಿಯಾಗಿದೆ. ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಸಮಸ್ಯೆಯ ಬಗ್ಗೆ ಪಾರ್ಲಿಮೆಂಟ್‌ನ ಬಗ್ಗೆ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಗಮನಹರಿಸುವಲ್ಲಿ ಜಿಲ್ಲೆಗೆ ಅತಿಹೆಚ್ಚು ಅನುದಾನ ತಂದಿದ್ದಾರೆ. ಜಿಲ್ಲೆ ಅಭಿವೃದ್ದಿಗೆ ನಳಿನ್ ಕುಮಾರ್ ಮತವನ್ನು ನೀಡುವುದರ ಮೂಲಕ ದೇಶದ ರಕ್ಷಣೆಗೆ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಯಾಗಿಸೋಣ. ಬಂಟ್ವಾಳ ಕ್ಷೇತ್ರ ಗ್ರಾಮ ಗ್ರಾಮಗಳಲ್ಲಿ ಬಿ.ಜೆ.ಪಿ ಪರವಾದ ವಾತವರಣವಿದ್ದು ಬಿ.ಜೆ.ಪಿ ಅತಿ ಹೆಚ್ಚು ಮತಗಳು ಗಳಿಸಲಿದೆ. ಈ ಸಂದರ್ಭದಲ್ಲಿ ನಾವೂರ ಪ್ರಭಾರಿಯಾದ ಧನಂಜಯ ಶೆಟ್ಟಿ ,ಸರಪಾಡಿ ಪಂಚಾಯತ್ ಸದಸ್ಯರಾದ ಸದಾನಂದ ಗೌಡ, ಜನಾರ್ಧನ, ಜಯಂತಿ, ಪಂಚಾಯತ್ ಸಮಿತಿಯ ಅಧ್ಯಕ್ಷರಾದ ಶಾಂತವೀರ ಪೂಜಾರಿ, ಪ್ರಮುಖರಾದ ಸಂಜೀವ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಬಂಟರ ಸಂಘ ನರಿಕೊಂಬು – ಶಂಭೂರು ಅಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ ಪುನರಾಯ್ಕೆ..

ಬಂಟ್ವಾಳ: ನರಿಕೊಂಬು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ ಅವರು ಬಂಟರ ಸಂಘ ನರಿಕೊಂಬು- ಶಂಭೂರು ಗ್ರಾಮ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಆಗಿದ್ದಾರೆ. ಜು. 10 ರಂದು ಕರ್ಬೆಟ್ಟು ಭಾಸ್ಕರ ಶೆಟ್ಟಿ ವಸತಿಗ್ರಹದಲ್ಲಿ...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ..

ಮಂಗಳೂರು : ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ...