ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮೆಡಿಕಲ್ ರೆಪ್ರೆಸೆಂಟೇಟಿವ್ ಓರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ.
ಅಭಿಷೇಕ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.