Saturday, January 31, 2026

ಮೆಲ್ಕಾರ್ ಕಾಲೇಜಿನಲ್ಲಿ ಕಳ್ಳತನ

ಬಂಟ್ವಾಳ: ಖಾಸಗಿ ಕಾಲೇಜೊಂದರಲ್ಲಿ ಕಳ್ಳತನ ನಡೆದ ಘಟನೆ ಮಾ. 29ರಂದು ಮೆಲ್ಕಾರ್ ಸಮೀಪದ ಮಾರ್ನಬೈಲುನಲ್ಲಿ ಬೆಳಕಿಗೆ ಬಂದಿದೆ.
ಈ ಕಾಲೇಜಿನಲ್ಲಿ ಮಾ. 29ರಂದು ಸ್ಥಳೀಯರು ನೋಡಿದಾಗ ಬಾಗಿಲು ತೆರೆದಿದ್ದು, ಕಾಲೇಜಿನವರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಚೇರಿ ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಕಪಾಟಿನ ಬಾಗಿಲು ತೆರೆದು ಚೆಲ್ಲಾಪಿಲ್ಲಿಗೊಳಿಸಿದ್ದಾರೆ.
ಸಿಸಿ ಕ್ಯಾಮರಾ ಹಾಗೂ ಮಾನಿಟರ್ ಕಳವು ನಡೆಸಿದ್ದು, ಸೊತ್ತುಗಳ ಮೌಲ್ಯ ಸುಮಾರು 20 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...