Friday, January 30, 2026

ಗ್ಯಾಸ್ ಟ್ಯಾಂಕ್ ರ್ ಕಾರು ಮುಖಾಮುಖಿ ಡಿಕ್ಕಿ: ಆರು ಮಂದಿಗೆ ಗಂಭೀರ ಗಾಯ

ಬಂಟ್ವಾಳ: ಗ್ಯಾಸ್ ಟ್ಯಾಂಕ್ ರ್ ಇಕೋ ಕಾರಿಗೆ ಮೆಲ್ಕಾರ್ ಸಮೀಪದ ಪಾಣೆಮಂಗಳೂರು ಎಂಬಲ್ಲಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿಲಾಗಿದೆ.


ಮುಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ವಾಪಸು ಆಗುತ್ತಿದ್ದರು.
ಅವರು ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಎದುರಿನಿಂದ ಗ್ಯಾಸ್ ಟ್ಯಾಂಕ್ ರ್ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಗಂಭೀರ ಗಾಯವಾಗಿದೆ.
ಕಾರಿನಲ್ಲಿ ರುವ ಪ್ರಯಾಣಿಕರ ಹೆಸರು: ರಘುನಾಥ, ಶೇಖರ ಐಕಳ, ಮುದರ, ರಾಜೇಶ, ಸಂದೀಪ, ಗೋಪಾಲ.

ಸ್ಥಳಕ್ಕೆ ಟ್ರಾಫಿಕ್ ಎಸ್‌ಐ.ರಾಜೇಶ್ ಮತ್ತು ತಂಡ ಬೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆ ಗೆ ದಾಖಲಿಸುವ ಕೆಲಸ ಹಾಗೂ ಟ್ರಾಫಿಕ್ ಕಂಟ್ರೋಲ್ ಕೆಲಸ ಮಾಡುತ್ತಿದ್ದಾರೆ

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...