Tuesday, February 3, 2026

ವಿವಿಧ ಬೇಡಿಕೆಯನ್ನು ಮುಂದಿಟ್ಟುಕೊಂಡು ಮೀಟರ್ ರೀಡರ್ ಗಳಿಂದ ಪ್ರತಿಭಟನೆ

ಬಂಟ್ವಾಳ: ಮೀಟರ್ ರೀಡಿಂಗ್‌ನ ಗುತ್ತಿಗೆಯನ್ನು ಅತಿ ಕಡಿಮೆ ದರಕ್ಕೆ ನೀಡಿ ಮೆಸ್ಕಾಂ ಮೀಟರ್ ರೀಡರ್‌ಗಳನ್ನು ಮೆಸ್ಕಾಂ ಕಡಿಮೆ ವೇತನಕ್ಕೆ ದುಡಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಹಾಗೂ ಮೀಟರ್ ರೀಡರ್‌ಗಳು ತಡೆ ಹಿಡಿದಿರುವ ವೇತನ ಬಿಡುಗಡೆಗೆ ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕಿನ ಮೀಟರ್ ರೀಡರ್‌ಗಳು ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಮಾತನಾಡಿ, ಶಾಸಕರು, ಸಂಸದರು, ಸಚಿವರು ಚುನಾವಣೆಯ ಸಂದರ್ಭದಲ್ಲಿ ಮೆಸ್ಕಾಂ ಮೀಟರ್ ರೀಡರ್‌ಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡುತ್ತಿದ್ದು, ಆದರೆ ಗೆದ್ದ ಬಳಿಕ ಯಾವುದನ್ನೂ ಮಾಡುತ್ತಿಲ್ಲ. ಮೀಟರ್ ರೀಡಿಂಗ್‌ನ ಹಿಂದಿನ ಗುತ್ತಿಗೆಯ ಬದಲು ಪ್ರಸ್ತುತ ಕಡಿಮೆ ಗುತ್ತಿಗೆಯ ಮೂಲಕ ಮೀಟರ್ ರೀಡರ್‌ಗಳ ವೇತನವನ್ನು ಕಡಿಮೆಗೊಳಿಸುವ ಹುನ್ನಾರ ನಡೆಸುತ್ತಿದೆ. ಜತೆಗೆ ಹಿಂದಿನ ವೇತನವನ್ನೂ ತಡೆ ಹಿಡಿದಿದೆ ಎಂದು ಆರೋಪಿಸಿದರು.


ನಮ್ಮ ಬೇಡಿಕೆ ಈಡೇರುವವರೆಗೆ ಮೀಟರ್ ರೀಡಿಂಗ್ ಮೆಷಿನನ್ನು ಮೆಸ್ಕಾಂಗೆ ನೀಡುವುದಿಲ್ಲ, ಮುಂದೆ ಬೇಡಿಕೆ ಈಡೇರದೇ ಇದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ಇಇ ಅವರ ಮೂಲಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಪ್ರಮುಖರಾದ ಗೋಪಾಲ ನೇರಳಕಟ್ಟೆ, ಜಯರಾಮ್ ಬಂಟ್ವಾಳ, ಗೋಪಾಲಕೃಷ್ಣ ಬಂಟ್ವಾಳ, ಸದಾಶಿವ ಬಂಟ್ವಾಳ, ಮೋನಪ್ಪ ಬೆಳ್ತಂಗಡಿ, ರಮೇಶ್ ಬೆಳ್ತಂಗಡಿ, ಉದಯಕುಮಾರ್ ವಿಟ್ಲ ಪಾಲ್ಗೊಂಡಿದ್ದರು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...