Friday, June 27, 2025

‘ವಿದ್ಯುತ್‌ ಸಂಬಂಧಿತ ಎಲ್ಲಾ ಮಾಹಿತಿಗಾಗಿ ಶೀಘ್ರದಲ್ಲೇ ಆಪ್’‌: ಮೆಸ್ಕಾಂ

ಮಂಗಳೂರು: ಬೆಸ್ಕಾಂ ಮಾದರಿಯಲ್ಲಿ ಮೆಸ್ಕಾಂನಲ್ಲೂ ವಿದ್ಯುತ್‌ ಸಂಬಂಧಿಸಿದ ಎಲ್ಲಾ ಮಾಹಿತಿ ಹಾಗೂ ಬಿಲ್‌ ಪಾವತಿಗಾಗಿ ಆ್ಯಪ್‌ ಒಂದನ್ನು 2 ತಿಂಗಳುಗಳ ಒಳಗಾಗಿ ಜಾರಿಗೊಳಿಸಲಾಗುವುದು ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್‌ ಆರ್‌. ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕಿ ಸ್ನೇಹಲ್‌ ಆರ್‌. ಅವರು, ದ.ಕ. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ವಯರ್‌ಗಳಿಗೆ ಕವರ್‌ ಕಂಡಕ್ಟರ್‌ ಹಾಕಲು ತೀರ್ಮಾನ ಕೈಗೊಳ್ಳಲಾಗಿದೆ. ಡಿಜಿಟಲ್‌ ಮೀಟರ್‌ ಅಳವಡಿಸುವ ಬಗ್ಗೆಯೂ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ಮಳೆಗಾಳದಲ್ಲಿ ಉಂಟಾಗುವ ತುರ್ತು ಕೆಲಸಗಳನ್ನು ನಿಭಾಯಿಸಲು 851 ಸಿಬ್ಬಂದಿಗಳ ವಿಶೇಷ ತಂಡವನ್ನು ರಚನೆ ಮಾಡಲಾಗಿದ್ದು, ಈ ವಿಶೇಷ ಪಡೆಯಲ್ಲಿ ದ.ಕ.ದಲ್ಲಿ 234, ಉಡುಪಿಯಲ್ಲಿ 207, ಶಿವಮೊಗ್ಗದಲ್ಲಿ 225, ಚಿಕ್ಕಮಗಳೂರಿನಲ್ಲಿ 185 ಸಿಬ್ಬಂದಿಗಳು ಇದ್ದಾರೆ. 46 ವಾಹನಗಳನ್ನು ಕೂಡಾ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕೈಗಾರಿಕೆಗಳ ವಿದ್ಯುತ್‌ ಬೇಡಿಕೆ ಶೇ. 60ರಷ್ಟು ಕುಸಿದು, ಗೃಹಬಳಕೆಗೆ ಶೇ. 30ರಷ್ಟು ಏರಿಕೆಯಾಗಿತ್ತು. ಪ್ರಸ್ತುತ ಕೈಗಾರಿಕೆಗಳ ವಿದ್ಯುತ್‌ ಬೇಡಿಕೆ ಶೇ. 70ಕ್ಕೆ ಏರಿಕೆಯಾಗಿದೆ. ಲಾ‌ಕ್‌ಡೌನ್‌ ಸಂದರ್ಭದಲ್ಲಿ ಕಂದಾಯ ಶೇ. 50ರಷ್ಟು ಮಾತ್ರ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ವಿದ್ಯುತ್‌ ಆಘಾತದಿಂದ 65 ವ್ಯಕ್ತಿಗಳು ಮೃತಪಟ್ಟಿದ್ದು, 56.26 ಲಕ್ಷ ರೂ. ಪರಿಹಾರ ನೀಡಲಾಗಿದೆ. ಗಾಯಗೊಂಡ 33 ಮಂದಿಗೆ 0.75 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲೇ ಮಂಗಳೂರು ವಲಯದ ಮುಖ್ಯ ಎಂಜಿನಿಯರ್‌ ಮಂಜಪ್ಪ ಮಾತನಾಡಿ, ವಿದ್ಯುತ್‌ ಆಘಾತವಾಗದಂತೆ ತಡೆಯಲು ರೈತರು, ಗೃಹ ಬಳಕೆದಾರರು ಅರ್ಥ್ ಲೀಕೇಜ್‌ ಸರ್ಕಿಟ್‌ ಬ್ರೇಕರ್‌ ಅಳವಡಿಕೆ ಮಾಡಬೇಕು ಎಂದು ತಿಳಿಸಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...