Friday, June 27, 2025

ವಿಟ್ಲ ಮೆಸ್ಕಾಂ ಉಪವಿಭಾಗ ದಸರಾ ಕ್ರೀಡಾಕೂಟ

ವಿಟ್ಲ: ಸೇವಾ ವಲಯದಲ್ಲಿ ಕೆಲಸ ಮಾಡುತ್ತಿರುವ ನಾವು ನಮ್ಮೊಳಗೆ ಉತ್ತಮ ವಿಚಾರವನ್ನು ಮುಂದಿಟ್ಟುಕೊಂಡು ಸ್ಪರ್ಧಾ ಮನೋಭಾವದಿಂದ ಮುನ್ನಡೆದಾಗ ಉತ್ತಮ ಸೇವೆಯನ್ನು ನೀಡಲು ಸಾಧ್ಯ ಎಂದು ವಿಟ್ಲ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರವೀಣ್ ಜೋಷಿ ಹೇಳಿದರು.
ಅವರು ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ವಿಟ್ಲ ಮೆಸ್ಕಾಂ ಉಪವಿಭಾಗದ ಅಧಿಕಾರಿಗಳು, ನೌಕರರ ಸಂಘ ಹಾಗೂ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಆಶ್ರಯದಲ್ಲಿ ನಡೆದ ೮ ನೇ ವರ್ಷದ ದಸರಾ ಕ್ರೀಡಾ ಕೂಟದ ಸಭಾಧ್ಯಕ್ಷತೆ ವಹಿಸಿ ಮಾತಾಡಿದರು.
ಕಾರ್ಯಕ್ರಮವನ್ನು ಬಂಟ್ವಾಳ ಮೆಸ್ಕಾಂ ವಿಭಾಗೀಯ ಕಚೇರಿಯ ಲೆಕ್ಕಾಧಿಕಾರಿ ಚಂದ್ರಶೇಖರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಕೆಪಿಟಿಸಿಎಲ್ ವೃತ್ತದ ಸಂಘಟನಾ ಕಾರ್ಯದರ್ಶಿ ಶಂಕರ ಪ್ರಕಾಶ್, ಜಿಲ್ಲಾ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯ ಬಾಲಕೃಷ್ಣ ಸೆರ್ಕಳ, ವಿಟ್ಲ ಉಪ ಸಮಿತಿ ಉಪಾಧ್ಯಕ್ಷ ಕೃಷ್ಣ ಬನಾರಿ, ಕೆಪಿಟಿಸಿಎಲ್‌ನ ರಾಜ್ಯ ಮಟ್ಟದ ಆಟಗಾರ ಕೀರ್ತಿ ಕಪೂರ್, ವಿಟ್ಲ ಮೆಸ್ಕಾಂನ ಸಹಾಯಕ ಲೆಕ್ಕಾಧಿಕಾರಿ ನೆಲ್ಸನ್ ನವೀನ್ ಕುಮಾರ್, ಸಹಾಯಕ ಇಂಜೀನೀಯರ್ ಶಶಾಂಕ್, ದೇವಿಕಿರಣ್, ಮೇಲ್ವಿಚಾರಕಿ ಗೀತಾ, ಜಯಂತಿ, ಉದಯಕುಮಾರ್ ಭಾಗವಹಿಸಿದ್ದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ವಿಟ್ಲ ಉಪ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಅಡ್ಯಂತಾಯ ಬಹುಮಾನಗಳನ್ನು ವಿತರಿಸಿದರು. ಬಾಬು ಮೂಲ್ಯ ಮತ್ತು ಜಾನ್ ಉಪಸ್ಥಿತರಿದ್ದರು. ವಿಟ್ಲ ಮೆಸ್ಕಾಂನ ಸಹಾಯಕ ಇಂಜಿನೀಯರ್ ಸತೀಶ್ ಸಪಲ್ಯ ಸ್ವಾಗತಿಸಿದರು. ಕೆಪಿಟಿಸಿಎಲ್ ನೌಕರರ ಸಂಘದ ಪ್ರಾಥಮಿಕ ಸಮಿತಿ ಅಧ್ಯಕ್ಷ ಪದ್ಮನಾಭ ಅಡ್ಯೇಯಿ ಕಾರ್ಯಕ್ರಮ ನಿರೂಪಿಸಿದರು. ಉಕ್ಕುಡ ಶಾಖಾಧಿಕಾರಿ ಆನಂದ ವಂದಿಸಿದರು.
ಕ್ರೀಡಾಕೂಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಟ್ಲ ಕೆಪಿಟಿಸಿಎಲ್ ಪ್ರಥಮ, ಎಲ್‌ಇಸಿ ದ್ವಿತೀಯ ಪಡೆದರೆ, ಕ್ರಿಕೆಟ್‌ನಲ್ಲಿ ಸಾಲೆತ್ತೂರು ಶಾಖೆ ಪ್ರಥಮ, ಉಕ್ಕುಡ ಶಾಖೆ ದ್ವಿತೀಯ, ಕಬಡ್ಡಿ ಪಂದ್ಯಾಟದಲ್ಲಿ ವಿಟ್ಲ ಕೆಪಿಟಿಸಿಎಲ್ ಪ್ರಥಮ ಸ್ಥಾನಿಯಾದರೆ, ಉಕ್ಕುಡ ಶಾಖೆ ದ್ವಿತೀಯ, ಹಗ್ಗಜಗ್ಗಾಟದಲ್ಲಿ ವಿಟ್ಲ ಕೆಪಿಟಿಸಿಎಲ್ ಪ್ರಥಮ ಮತ್ತು ಸಾಲೆತ್ತೂರು ಶಾಖೆ ದ್ವಿತೀಯ ಸ್ಥಾನ ಪಡೆಯಿತು.

 

 

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...