Friday, June 27, 2025

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಜನತಾದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದು, ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯು ಪೂವಾ೯ನುಮತಿ ಪಡೆಯದೆ ಗೈರು ಹಾಜರಾಗಿದ್ದರು.

ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಧಿಕಾರಿಗಳಿಗೆ ನಿದೇ೯ಶಿಸಿದ್ದಾರೆ.

More from the blog

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...