Monday, January 26, 2026

ದ್ವಿಚಕ್ರದಲ್ಲಿ ಕೆಲಸಕ್ಕೆ ತೆರಳಿದ ವ್ಯಕ್ತಿ ಬಿಸಿರೋಡಿನಲ್ಲಿ ವಾಹನ ಇಟ್ಟು ನಾಪತ್ತೆ

ಬಂಟ್ವಾಳ : ಕೆಲಸಕ್ಕೆಂದು ಸಂಜೆ ಮನೆಯಿಂದ ತೆರಳಿದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿದೆ.
ಎರ್ಮಾಳ ಕಂಡದೊಟ್ಟು ನಿವಾಸಿ ಉಮೇಶ್ ಕುಲಾಲ್ (42) ಕಾಣೆಯಾದ ವ್ಯಕ್ತಿ.
ಉಮೇಶ್ ಅವರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಸೆ.12 ರಂದು ಧ್ವಿಚಕ್ರ ವಾಹನದಲ್ಲಿ ಮನೆಯಿಂದ ಕೆಲಸಕ್ಕೆಂದು ತೆರಳಿದವರು ಕೆಲಸಕ್ಕೆ ಹೋಗದೆ ವಾಪಾಸು ಮನೆಗೂ ಬಾರದೆ ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ
ಚಂದ್ರಾವತಿ ದೂರಿನಲ್ಲಿ ತಿಳಿಸಿದ್ದಾರೆ.
ಇವರು ವಿಪರೀತ ಕುಡಿತದ ಚಟ ಹೊಂದಿದ್ದು, ಕಳೆದ ನಾಲ್ಕು ತಿಂಗಳಿನಿಂದ ಕುಡಿಯುವುದನ್ನು ಬಿಟ್ಟಿ ದ್ದರು.
ಆದರೆ ಅ ಬಳಿಕ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದರು ಎಂದು ಪತ್ನಿ ತಿಳಿಸಿದ್ದಾರೆ. ಮನೆಯಿಂದ ದ್ವಿಚಕ್ರ ದಲ್ಲಿ ತೆರಳಿದ ಇವರು ಬಿಸಿರೋಡಿನಲ್ಲಿ ವಾಹನ ಇಟ್ಟು ಅಲ್ಲಿಂದ ಕಾಣೆಯಾಗಿದ್ದಾರೆ.
ಪೋಲಿಸರಿಗೆ ದ್ವಿಚಕ್ರ ವಾಹನ ಹಾಗೂ ಇತರ ವಸ್ತುಗಳು ಕೈಗೆ ಸಿಕ್ಕಿವೆ. ಈತನ ಪತ್ತೆಗಾಗಿ ಪೋಲಿಸರು ಹುಡುಕಲು ಆರಂಭಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...