Wednesday, July 2, 2025

ಪ್ರೀತಿಗಾಗಿ ನಾಪತ್ತೆಯಾದಳಾ ಯವತಿ

ಬಂಟ್ವಾಳ: ಚೀಟಿ ಬರೆದಿಟ್ಟು ಯುವತಿಯೋರ್ವಳು ಸಂಬಂಧಿ ಕರ ಮನೆಯಿಂದ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ದಡ್ಡು ನಿವಾಸಿ ಉದಯಕುಮಾರ್ ಅವರ ಪುತ್ರಿ ದಿವ್ಯ ಶ್ರೀ (19) ಎಂಬ ಯುವತಿ ಕಾಣೆಯಾಗಿದ್ದಾಳೆ.
ಪಿ.ಯು.ಸಿ‌. ವಿದ್ಯಾಭ್ಯಾಸ ಮುಗಿಸಿದ ಬಳಿಕ ಶಿಕ್ಷಣ ಮುಂದುವರಿಸದ ದಿವ್ಯ ಕಳೆದ ಎರಡು ತಿಂಗಳಿನಿಂದ ಪುಂಜಾಲಕಟ್ಟೆಯ ಮೂಡುಪಡುಕೋಡಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಳು.
ಎಂದಿನಂತೆ ಮನೆಯಲ್ಲಿದ್ದ ದಿವ್ಯ ಇಂದು ಬೆಳಿಗ್ಗೆ ಯಿಂದ ಮನೆಯಲ್ಲಿ ಇರದೆ ಕಾಣೆಯಾಗಿದ್ದಾಳೆ.
ಇವಳು ಮನೆ ಬಿಟ್ಟು ಹೋಗುವ ವೇಳೆ ಚೀಟಿಯೊಂದನ್ನು ಬರೆದಿಟ್ಟಿದ್ದು ಮನೆಯವರಿಗೆ ಸಿಕ್ಕಿದೆ. ಅದರಲ್ಲಿ ನಾನು ಮನೆ ಬಿಟ್ಟು ಹೋಗುವುದಾಗಿಯೂ ನನ್ನ ನ್ನು ಹುಡುಕುವ ಪ್ರಯತ್ನ ಬೇಡ , ನಾನು ಪ್ರೀತಿಯನ್ನು ಹುಡುಕಿಕೊಂಡು ಹೋಗುತ್ತಿದ್ದೇನೆ ಎಂದು ಬರೆಯಲಾಗಿದೆ ಎಂದು ಹೇಳಲಾಗಿದೆ.
ಪುಂಜಾಲಕಟ್ಟೆ ಠಾಣೆಯಲ್ಲಿ ದಿವ್ಯಳಾ ತಾಯಿ ಅನಿತಾ ನೀಡಿದ ದೂತಿನಂತೆ ಎಸ್.ಐ.ಸೌಮ್ಯ ಅವರು ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ..

ವಿಟ್ಲ: ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪೇಟೆಯಲ್ಲಿ ಕೆಲವು ದಿನಗಳಿಂದ ಸಮರ್ಪಕ ಸಂಚಾರ ವ್ಯವಸ್ಥೆ ಕಲ್ಪಿಸಿದ್ದು ಮಂಗಳವಾರ ಬೆಳಗ್ಗೆ ಏಕಾಏಕಿ ಅಟೋರಿಕ್ಷಾಗಳು ರಸ್ತೆಯಲ್ಲಿ...

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...