Monday, July 14, 2025

ಮಿತ್ತನಡ್ಕ ಶಾಲಾ ಮಕ್ಕಳಿಗೆ ವಾಂತಿಬೇಧಿ: ಬಾವಿ ನೀರು ಪರೀಕ್ಷೆಗೆ ಮೈಸೂರು ಪ್ರಯೋಗಾಲಯಕ್ಕೆ

ಬಂಟ್ವಾಳ: ಮಿತ್ತನಡ್ಕ ಶಾಲೆಯ ವಿದ್ಯಾರ್ಥಿಗಳು ಸೇರಿ ಒಟ್ಟು 16 ಮಂದಿಗೆ ಫೆ.26ರಂದು ವಾಂತಿ-ಬೇಧಿಯ ಸಮಸ್ಯೆ ಕಂಡುಬಂದಿದೆ. ಪ್ರಸ್ತುತ ಅಲ್ಲಿನ ನೀರು ಹಾಗೂ ಬೇಧಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿ ಕೈಸೇರಿದ ಬಳಿಕ ಕಾರಣ ತಿಳಿಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು ಅವರು ಗುರುವಾರ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ನಡೆದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು.
ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯ ಉಸ್ಮಾನ್ ಕರೋಪಾಡಿ ಅವರು, ಮಿತ್ತನಡ್ಕ ಶಾಲೆಯ ವಿದ್ಯಾರ್ಥಿಗಳ ವಾಂತಿ-ಬೇಧಿ ಸಮಸ್ಯೆಗೆ ಕಾರಣ ಕೇಳಿದರು. ಫೆ. 26ರಂದು ಈ ರೀತಿ ವಾಂತಿ ಬೇಧಿಯ ಸಮಸ್ಯೆ ಕಂಡುಬಂದಿದ್ದು, ಮೊದಲ ದಿನ 6 ಮಂದಿ, 2ನೇ ದಿನ 2 ಮಂದಿ ಹಾಗೂ 3ನೇ ದಿನ 6 ಮಂದಿಗೆ ಈ ರೀತಿ ಆರೋಗ್ಯ ಏರುಪೇರು ಕಂಡುಬಂದಿತ್ತು. ಪಸ್ತುತ ಎಲ್ಲರೂ ಆರೋಗ್ಯದಿಂದಿದ್ದಾರೆ. ಬಾವಿ ಹಾಗೂ ಟ್ಯಾಂಕ್‌ನ ನೀರನ್ನು ಪರೀಕ್ಷೆಗೆ ಕಳುಹಿಸಿದಾಗ ಟ್ಯಾಂಕ್‌ನ ನೀರು ಕಲುಷಿತವಾಗಿ ಕಂಡುಬಂದಿತ್ತು. ಈಗ ಬಾವಿ ಹಾಗೂ ಟ್ಯಾಂಕ್‌ನ ನೀರು ಉಪಯೋಗಿಸುತ್ತಿಲ್ಲ. ಖಾಯಿಲೆ ಕಂಡುಬಂದಿರುವವರ ಭೇಧಿಯನ್ನೂ ಜಿಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶಾಲೆಯ ಅಕ್ಕಿ, ಬೇಳೆ ಹಾಗೂ ಎಣ್ಣೆಯ ಸ್ಯಾಂಪಲನ್ನು ಮೈಸೂರಿನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದರು. ತಾ.ಪಂ.ನ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸಮಿತಿ ಸಭೆಯು ಸಮಿತಿ ಅಧ್ಯಕ್ಷ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2019-20ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನದ ಖರ್ಚು-ವೆಚ್ಚಗಳ ಕುರಿತು ಅಧ್ಯಕ್ಷರು ಎಲ್ಲಾ ಇಲಾಖಾಧಿಕಾರಿಗಳಿಂದ ಅಧ್ಯಕ್ಷರು ಪ್ರಗತಿ ಪರಿಶೀಲಿಸಿದರು. ಮಾರ್ಚ್ ಅಂತ್ಯದೊಳಗೆ ಕಾಮಗಾರಿಗಳನ್ನು ಪೂರ್ತಿಗೊಳಿಸುವಂತೆ ಸೂಚಿಸಲಾಯಿತು. ಆರೋಗ್ಯ ಇಲಾಖೆಗಳ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಯಿತು.

ತಾ.ಪಂ.ನ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯು ಸಮಿತಿ ಅಧ್ಯಕ್ಷ, ತಾ.ಪಂ.ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೊರೊನಾ ವೈರಸ್ ಎಚ್ಚರಿಕೆ ಕುರಿತಂತೆ ಎಲ್ಲರಿಗೂ ಮಾಹಿತಿ ತಲುಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಽಕಾರಿಗಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಸಮಿತಿ ಸದಸ್ಯರಾದ ಯಶವಂತ ಪೊಳಲಿ, ಮಂಜುಳಾ ಕುಶಲ ಎಂ., ಬೇಬಿ, ರಮೇಶ್ ಕುಡ್ಮೇರು, ಹೈದರ್ ಕೈರಂಗಳ, ಧನಲಕ್ಷೀ ಸಿ.ಬಂಗೇರ, ಶಿವಪ್ರಸಾದ್ ಮಂಜುಳಾ ಸದಾನಂದ್, ವನಜಾಕ್ಷಿ ಬಿ, ಶೋಭಾ ರೈ ಉಪಸ್ಥಿತರಿದ್ದರು. ತಾ.ಪಂ.ಕಾರ್ಯನಿರ್ವಹಣಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...