Monday, January 26, 2026

ಮಿತ್ತೂರು: ಕಾರು – ದ್ವಿಚಕ್ರ ವಾಹನದ ಮಧ್ಯೆ ಅಪಘಾತ – ಓರ್ವನಿಗೆ ಗಾಯ

ವಿಟ್ಲ: ಕಾರು ಹಾಗು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮಿತ್ತೂರು ಸಮೀಪ‌ ಆ.೨೩ರಂದು ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಿಂದಾಗಿ ದ್ವಿಚಕ್ರ ಸವಾರ ಕೋಲ್ಪೆ ಸಮೀಪದ ಸೂರ್ಯ ನಿವಾಸಿ ವಾಸಪ್ಪ ಸಪಲ್ಯರವರು ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಕಾರು ಮಂಗಳೂರು ಕಡೆಯಿಂದ ಪುತ್ತೂರು ಭಾಗಕ್ಕೆ ತೆರಳುತ್ತಿತ್ತು ಎಂದು ಮಾಹಿತಿ ಲಭಿಸಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...