Wednesday, February 12, 2025

ಇಸ್ರೇಲ್ ಮಾದರಿಯ ತಾಂತ್ರಿಕ ಕೃಷಿಗೆ ದ.ಕ.ಮತ್ತು ಉಡುಪಿ ಜಿಲ್ಲೆಸೂಕ್ತ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ದ.ಕ.ಮತ್ತು ಉಡುಪಿ ಜಿಲ್ಲೆ ಯಲ್ಲಿ ಇಸ್ರೇಲ್ ಮಾದರಿಯ ತಾಂತ್ರಿಕ ಮಾದರಿಯ ಲ್ಲಿ ಕೃಷಿ ಮಾಡಲು ಇಲ್ಲಿನ ಮಣ್ಣು ಸೂಕ್ತವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ‌

ಅವರು ದ.ಕ.ಜಿಲ್ಲಾ ಪಂಚಾಯತ್ ಮಂಗfಳೂರು, ಕೃಷಿ ಇಲಾಖೆ ವತಿಯಿಂದ ವಿವಿಧ ಇಲಾಖೆ ಗಳ ಒಗ್ಗೂಡುವಿಕೆಯೊಂದಿಗೆ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆದ
ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ 2019-20 ಕಾರ್ಯಕ್ರಮ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮ ವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ
ಮಾತನಾಡಿದರು.

ದ.ಕ.ಜಿಲ್ಕೆಯಲ್ಲಿ ಕೃಷಿ ಸಂಸ್ಕೃತಿಯನ್ನು ನಾವು ಮುಂದಿನ ಜನಾಂಗಕ್ಕೆ ಉಳಿಸಿ ತಿಳಿಸಿಕೊಡದಿದ್ದರೆ, ಮಕ್ಕಳಿಗೆ ಕೃಷಿಯ ಬಗ್ಗೆ ಆಸಕ್ತಿ ತೋರಿಸದಿದ್ದರೆ ಬಂಟ್ವಾಳ ತಾಲೂಕಿನ‌ ಪ್ರತಿಯೊಂದು ಮನೆ ವೃದ್ದಾಶ್ರಮವಾಗುವುದರಲ್ಲಿ ಸಂದೇಹವಿಲ್ಲ ಎಂದು ಅವರು ಹೇಳಿದರು. ಕೃಷಿ ಮಾರುಕಟ್ಟೆಯ ಲ್ಲಿ
ನಾವು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕಾಗಿದೆ ಎಂದರು.

ಗರಂ ಅದ ಶಾಸಕರು:

ಕೃಷಿ ಕರಿಗೆ ಉಪಯೋಗ ವಾಗದ ಕಾರ್ಯಕ್ರಮ ದ ಮೂಲಕ ಇಲಾಖೆ ರೈತರನ್ನು ಮೋಸ ಮಾಡವುದು ಸರಿಯಲ್ಲ ಎಂದು ಅವರು ಹೇಳಿದರು.

ಕೃಷಿ ಇಲಾಖೆ ರೈತರ ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮ ಮಾಡಲು ಹೊರಟಿದೆ ಆದರೆ ಕಾರ್ಯಕ್ರಮ ದ ಆಮಂತ್ರಣ ಪತ್ರದಲ್ಲಿ ಅರ್ಧ ಗಂಟೆಗೊಮ್ಮೆ ಕಾರ್ಯಕ್ರಮ ಗಳ ಟೈಂ ಟೇಬಲ್ ನಮೂದಿ ಮಾಡಿದೆ.
ಇದು ಸಾಧ್ಯನಾ ಎಂದು ಪ್ರಶ್ನಿಸಿದರು.
ಕೇವಲ ವಾಹನ ಮೂಲಕ ಜಾಥ ಮಾಡುವುದಾ ಅಥವಾ ಕಾರ್ಯಕ್ರಮ ಮಾಡಲಿಕ್ಕೆ ಇದೆಯಾ ಎಂದು ಅವರು ಪ್ರಶ್ನಿಸಿದರು.
ಇಂತಹ ನಾಮಕಾವಸ್ಥೆಯ ಕಾರ್ಯಕ್ರಮ ನೀವು ಮಾಡುವುದೇ ಬೇಡ, ಮತ್ತು ಈ ರೀತಿಯಲ್ಲಿ ರೈತರನ್ನು ಮೋಸಮಾಡುವುದಕ್ಕೆ ನನ್ನ ವಿರೋಧ ವಿದೆ ಎಂದರು.
ಜೊತೆಗೆ ಈ ತಾಲೂಕಿನಲ್ಲಿ ಭತ್ತ, ಅಡಿಕೆ ಹೀಗೆ ಬೇರೆ ಬೇರೆ ಬೆಲೆಗಳ ನ್ನು ಬೆಳೆಯುವ ಬೆಳೆಗಾರರ ಮಾಹಿತಿ ಬೇಕು ಮತ್ತು ಯಾಕೆ ಇಳುವರಿ ಕಡಿಮೆ ರೈತರು ಯಾಕೆ ಕೃಷಿಯಿಂದ ದೂರ ಅಗುತ್ತಿದ್ದಾರೆ ಎಂಬ ಪೂರ್ಣ ಮಾಹಿತಿ ನಿಮ್ಮಲ್ಲಿ ಇದ್ದರೆ ಅದಕ್ಕೆ ಬೇಕಾದ ಕಾರ್ಯಕ್ರಮ ಗಳನ್ನು ಹಾಕಿ ಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಕೇವಲ ಮೈಕ್ ಬಳಸಿ ವಾಹನ ದಲ್ಲಿ ಹೋದರೆ ಯಾವ ಪ್ರಯೋಜನ ವಾಗುವುದಿಲ್ಲ.
ಇಲಾಖೆಯ ಪ್ರತಿಯೊಬ್ಬ ಅಧಿಕಾರಿಗೂ ಜವಬ್ದಾರಿ ಯಿದೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಕೃಷಿಯಿಂದ ದೂರ ಉಳಿಯುತ್ತಿದ್ದಾರೆ.
ಸ್ವಂತ ಜಮೀನಿನಲ್ಲಿ ಕೃಷಿ ಬೆಳೆದು ಇದಕ್ಕೆ ಸೂಕ್ತವಾದ ಬೆಲೆ ಸಿಗುವಂತೆ ಮಾಡಲು ಹಾಗೂ ಯಾಂತ್ರೀಕೃತ ಕೃಷಿಗೆ ಪೂರಕವಾದ ಕಾರ್ಯಕ್ರಮ ಸರಕಾರ ಕೈಗೊಂಡಿದೆ, ಇದಕ್ಕೆ ಕೃಷಿಕರು ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದರು.

ವೇದಿಕೆಯಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ. ಇಬ್ರಾಹಿಂ, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ,

ಬಂಟ್ವಾಳ ಎ.ಪಿ.ಎಂ.ಸಿ.ಅಧ್ಯಕ್ಷ ಪದ್ಮನಾಭ ರೈ,
ಬಂಟ್ವಾಳ ಕೃಷಿ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಬರಿಮಾರು.ತಾ.ಪಂ.ಸದಸ್ಯ ಪ್ರಭಾಕರ ಪ್ರಭು,

ತಾ.ಪಂ.ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ,

ಬಂಟ್ವಾಳ ಹೋಬಳಿ, ಪಾಣೆಮಂಗಳೂರು ಹೋಬಳಿ ಮತ್ತು ವಿಟ್ಲ ಹೋಬಳಿ ಮೂರು ವಿಭಾಗದಲ್ಲಿ
ಜೂನ್ 24 ರಿಂದ ಜುಲೈ 3 ರ ವರೆಗೆ ಪ್ರತಿ ಗ್ರಾಮದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮ ದ ಪ್ರಯೋಜನ ಪಡೆಯುವಂತೆ ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಅವರು ತಿಳಿಸಿದರು.
ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದ ರು.
ಬಂಟ್ವಾಳ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ನಂದನ್ ಶೆಣೈ ಸ್ವಾಗತಿಸಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...