Friday, January 30, 2026

ಸರಕಾರದ ಸವಲತ್ತನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸಲು ಮೋರ್ಚಾ ಪ್ರಮುಖ ಪಾತ್ರವಹಿಸಿಬೇಕು: ಶಾಸಕ ರಾಜೇಶ್ ನಾಯ್ಕ್

*ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಎಸ್. ಟಿ. ಮೋರ್ಚಾದ ವಿಶೇಷ ಕಾರ್ಯಕಾರಿಣಿಯು ಬಿಸಿರೋಡ್ ಸ್ಪರ್ಶ ಕಲಾಮಂದಿರದಲ್ಲಿ ಕ್ಷೇತ್ರ ಎಸ್. ಟಿ. ಮೋರ್ಚಾದ ಅಧ್ಯಕ್ಷರಾದ ರಾಮ ನಾಯ್ಕ್ ಕುಕ್ಕಿನಾರು ಇವರ ಅಧ್ಯಕ್ಷತೆಯಲ್ಲಿ ಜರಗಿತು.*

*ಕಾರ್ಯಕಾರಿಣಿಯನ್ನು ಬಂಟ್ವಾಳದ ರಾಜೇಶ್ ನಾಯ್ಕ್ ಉಳಿಪಾಡಿ* *ಇವರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈವುದರೊಂದಿಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಸರಕಾರದ ಸವಲತ್ತುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸುವಲ್ಲಿ ಮೋರ್ಚಾ ಮಹತ್ವದ ಪಾತ್ರವಹಿಸಬೇಕು. ಹಾಗೂ ಎಸ್. ಟಿ. ಸಮುದಾಯದ* *ಶೇ.80 ಜನರು ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡಿರುವುದಾಗಿ ಹರ್ಷ ವ್ಯಕ್ತಪಡಿಸಿದರು.*

*ವಿಶೇಷ ಕಾರ್ಯಕಾರಿಣಿಯ ಎರಡನೆಯ ಅವಧಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಜಿಲ್ಲಾ ಎಸ್. ಟಿ. ಮೋರ್ಚಾ ಪ್ರಭಾರಿಗಳೂ ಆದ ಜಯಶ್ರೀ ಕರ್ಕೇರ ಮತ್ತು ಸಮಾರೋಪದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ್ ಇವರು ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದರು.*

*ಬಂಟ್ವಾಳ ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಮಂಡಲ ಕಾರ್ಯದರ್ಶಿ ಹಾಗೂ ಎಸ್. ಟಿ. ಮೋರ್ಚಾದ ಪ್ರಭಾರಿ ರಮನಾಥ ರಾಯಿ, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ಅರಸಮಜಲ್ ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳಲು ತಿಳಿಸಿದರು.

*ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಹಾಗೂ ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಬಂಟ್ವಾಳ ಮಂಡಲ ಉಪಾಧ್ಯಕ್ಷ ಜಯರಾಮ್ ನಾಯ್ಕ್ ಕುಂಟ್ರಕಲ, ಬಂಟ್ವಾಳ ಮಂಡಲ ಕೋಶಾಧಿಕಾರಿ ಪ್ರಕಾಶ್‌ ಅಂಚನ್, ಮಂಡಲ ಪ್ರಮುಖರಾದ ಪುರುಷೋತ್ತಮ ಶೆಟ್ಟಿ, ಮಂಡಲ ಎಸ್. ಟಿ. ಮೋರ್ಚಾದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯಶವಂತ ನಾಯ್ಕ್ ನಗ್ರಿ, ಪಕ್ಷದ ಪ್ರಮುಖರಾದ ಯಶೋಧರ ಕರ್ಬೆಟ್ಟು, ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಿತಾ ಪುರುಷೋತ್ತಮ ನಾಯ್ಕ್ ಮತ್ತು ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.*

*ಈ ಕಾರ್ಯಕ್ರಮದಲ್ಲಿ ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಎಸ್. ಟಿ. ಸಮುದಾಯದ ಗ್ರಾಮ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.*

*ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಮಂಕುಡೆಕೋಡಿ, ಸ್ವಾಗತಿಸಿದರು. ಜಿಲ್ಲಾ ಎಸ್. ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಯನ್. ಎರ್ಮೆನಾಡ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಎಸ್. ಟಿ. ಮೋರ್ಚಾ ಉಪಾಧ್ಯಕ್ಷರಾದ ವಿಠಲ ನಾಯ್ಕ್ ಬಾಳ್ತಿಲ ಧನ್ಯವಾದಗೈದರು.*

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...