ಬಂಟ್ವಾಳ: ಅಕ್ರಮ ಗೋ ಸಾಗಾಟದ ವಿರುದ್ಧ ಪೋಲೀಸರು ಕಠಿಣ ಕಾನೂನು ಕ್ರಮಗಳನ್ನು ಕೈಕೊಳ್ಳಬೇಕು, ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸಹಕಾರ ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಮಾಧ್ಯಮ ದವರ ಜೊತೆ ಮಾತನಾಡಿ ದ ಅವರು ಜಿಲ್ಲೆಯ ಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಅಕ್ರಮವಾಗಿ ಗೋ ಕಳ್ಳತನ ನಡೆಯುತ್ತಿದೆ, ಇದರ ವಿರುದ್ದ ಕಟ್ಟು ನಿಟ್ಟಿನ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸುವುದಲ್ಲದೆ, ನಾಳೆ ಹಿರಿಯ ಪೋಲೀಸ್ ಅಧಿಕಾರಿಗಳನ್ನು ಬೇಟಿ ಮಾಡಿ ಚರ್ಚೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
ಇದರ ವಿರುದ್ದ ಪೋಲೀಸರು ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಂಡರೆ ಇಂತಹ ಅಶಾಂತಿ ತಲೆದೋರುವುದಿಲ್ಲ ಅದಕ್ಕೆ ಪೋಲೀಸರು ಅವಕಾಶ ನೀಡಬಾರದು ಎಂದು ಅವರು ಹೇಳಿದರು.