ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.
ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಅವರು, ತಮ್ಮ ಸಮಸ್ಯೆಗಳು ನೈಜವಾಗಿದ್ದು, ಇದಕ್ಕೆ ಸೂಕ್ತ ಸ್ಪಂದನೆ ನೀಡಬೇಕಾಗಿರುವುದು ಸರಕಾರದ ಜವಾಬ್ದಾರಿಯಾಗಿದೆ. ತಾನು ಮುಷ್ಕರಕ್ಕೆ ಬೆಂಬಲ ಸೂಚಿಸಿ, ಅಧಿವೇಶನ ಸಮಯದಲ್ಲಿ ತಮ್ಮ ಪರವಾಗಿ ಧ್ವನಿಯಾಗುವುದಾಗಿ ಆಶ್ವಾಸನೆ ನೀಡಿದರು. ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ, ಬಿಜೆಪಿ ಪ್ರಮುಖರಾದ ಧನಂಜಯ ಶೆಟ್ಟಿ ಸರಪಾಡಿ, ಶಶಿಕಾಂತ್ ಶೆಟ್ಟಿ ಆರ್ಮುಡಿ, ಹರೀಶ್ ರೈ ಪೆರಾಜೆ,ವಾಮನ ಆಚಾರ್ಯ, ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಕೆ., ಪೂಜಾರಿ, ರಾಜ್ಯ ಪರಿಷತ್ ಸದಸ್ಯ ಜನಾರ್ದನ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
